ರಾಷ್ಟ್ರೀಯ ಹೆದ್ದಾರಿ 66ರ ಕೋಲ್ನಾಡ್ ಭಾರತ್ ಬೆಂಜ್ ಶೋ ರೂಮ್ ಬಳಿ ಏಕಾಏಕಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.
ಮೃಪಟ್ಟವರನ್ನು ಮಂಗಳೂರು ನಗರದ ಪಂಜಿಮೊಗರು ತ್ರಿಶಾ ಕಾಲೇಜ್ ಬಳಿಯ ಉರಂದಾಡಿ ಗುಡ್ಡೆ ಪಡುಕೋಡಿ ನಿವಾಸಿ ಆರ್ ಸ್ವಾಮಿನಾಥನ್ ಎಂದು ಗುರುತಿಸಲಾಗಿದೆ. ಮುಂಬೈನಿಂದ ತಿರುವನಂತಪುರಕ್ಕೆ ಸರಕುಗಳನ್ನು ಸಾಗಿಸುತ್ತಿದ್ದ ಲಾರಿ ಮುಲ್ಕಿ ಸಮೀಪದ ಕೋಲ್ಕಾಡ್ ಭಾರತ್ ಬೆಂಜ್ ಶೋ ರೂಮ್ ತಲುಪುತ್ತಿದ್ದಂತೆ ಅದರ ಚಾಲಕ ವಿನುರಾಜ್ ಎಂಬಾತ ಏಕಾಏಕಿ ಲಾರಿ ನಿಲುಗಡೆಗೊಳಿಸಿದ್ದ ಎನ್ನಲಾಗಿದೆ.
ಆ ವೇಳೆ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕ್ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಆರ್ ಸ್ವಾಮಿನಾಥನ್‌ರವರಿಗೆ ಗಂಭೀರ ಗಾಯಗಳಾಗಿದ್ದು ಕೂಡಲೇ ಸ್ಥಳೀಯರು ಮುಕ್ಕ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಹಾಗೂ ಹೆದ್ದಾರಿ ಇಲಾಖೆಯ ಸಿಬ್ಬಂದಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಎರಡು ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಲಾರಿ ಚಾಲಕ ವಿನುರಾಜ್ ವಿರುದ್ಧ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…