ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮೆಲ್ಕಾರ್-ಕಲ್ಲಡ್ಕ ಹೆದ್ದಾರಿಯಲ್ಲಿ ಅಪಘಾತ: ಪುತ್ತೂರು ನಿವಾಸಿ ಅಶೋಕ್ ಮೃ*ತ್ಯು….!

ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್-ಕಲ್ಲಡ್ಕ ನಡುವಿನ ನರಹರಿ ಪರ್ವತದ ಮುಂಭಾಗದಲ್ಲಿ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.

ಮೃತರನ್ನು ಪುತ್ತೂರು ನಿವಾಸಿ ಅಶೋಕ್ ಎಂದು ಗುರುತಿಸಲಾಗಿದೆ. ಬಿ.ಸಿ.ರೋಡ್ ಕಡೆಗೆ ಸಂಚರಿಸುತ್ತಿದ್ದ ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿಗೆ, ವಿರುದ್ಧ ದಿಕ್ಕಿನಿಂದ ಒನ್‌ವೇ ನಿಯಮ ಉಲ್ಲಂಘಿಸಿ ರಾಂಗ್ ಸೈಡ್‌ನಲ್ಲಿ ಬಂದ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಹೆದ್ದಾರಿಯಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಇದ್ದರೂ, ಬೈಕ್ ಸವಾರ ನಿಯಮ ಉಲ್ಲಂಘಿಸಿ ಸಂಚರಿಸಿದ್ದೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಮಾರುತಿ ಕಾರಿನ ಮುಂಭಾಗದ ಬಾನೆಟ್, ಗ್ರಿಲ್ ಹಾಗೂ ಇಂಜಿನ್ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮುಂಭಾಗದ ವಿಂಡ್‌ಶೀಲ್ಡ್ ಗಾಜು ಪುಡಿಯಾಗಿದೆ. ಬೈಕ್‌ನ ಮುಂಭಾಗವೂ ಸಂಪೂರ್ಣ ನುಚ್ಚುನೂರಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶೋಕ್ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಸಂಬಂಧ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!