ಜನ ಮನದ ನಾಡಿ ಮಿಡಿತ

Advertisement

ದೆಹಲಿ: ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಣೆಗೆ ತೊಂದರೆ; ರೈತ-ವ್ಯಾಪಾರಿಗಳ ಹಿತ ರಕ್ಷಣೆಗೆ ಸಿಎಂ ಭೇಟಿ…!

ಮಹಾರಾಷ್ಟ್ರ ರಾಜ್ಯದಲ್ಲಿ ಕಾನೂನುಬದ್ಧವಾಗಿ ಸಾಗಣೆಯಾಗುತ್ತಿರುವ ಅಡಿಕೆ ವಾಹನಗಳ ಸಂಚಾರಕ್ಕೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ನಿಯೋಗ ಭೇಟಿ ಮಾಡಿ, ರೈತರು, ಅಡಿಕೆ ಬೆಳೆಗಾರರು ಹಾಗೂ ವ್ಯಾಪಾರಿಗಳ ಹಿತಾಸಕ್ತಿಯನ್ನು ಕಾಪಾಡಲು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದೆ.

ದಕ್ಷಿಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾದ ಅಡಿಕೆಯು ಸಾವಿರಾರು ರೈತರ ಜೀವನಾಧಾರವಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಮಹಾರಾಷ್ಟ್ರ ಸೇರಿದಂತೆ ದೇಶದ ಹಲವು ರಾಜ್ಯಗಳಿಗೆ ಅಡಿಕೆ ಸಾಗಾಟ ನಡೆಯುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಹಾರಾಷ್ಟ್ರದ ಕೆಲ ಪ್ರದೇಶಗಳಲ್ಲಿ ಅಡಿಕೆ ಸಾಗಣೆ ವಾಹನಗಳಿಗೆ ಅನಗತ್ಯ ತಪಾಸಣೆ, ವಿಳಂಬ ಹಾಗೂ ಸಂಚಾರದ ಅಡಚಣೆಗಳು ಉಂಟಾಗುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿವೆ.

ಇದರಿಂದ ರೈತರು, ವ್ಯಾಪಾರಿಗಳು, ಸಾಗಣಿದಾರರು ಹಾಗೂ ಅಡಿಕೆ ಆಧಾರಿತ ವ್ಯಾಪಾರ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ ಎಂದು ನಿಯೋಗ ಮುಖ್ಯಮಂತ್ರಿಗಳ ಗಮನಕ್ಕೆ ತಂದಿತು. ಕಾನೂನುಬದ್ಧ ದಾಖಲೆಗಳೊಂದಿಗೆ ಸಾಗಣೆಯಾಗುತ್ತಿರುವ ಅಡಿಕೆ ವಾಹನಗಳಿಗೆ ಯಾವುದೇ ರೀತಿಯ ಅನಗತ್ಯ ತೊಂದರೆ ಉಂಟಾಗದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಅಂತರರಾಜ್ಯ ವ್ಯಾಪಾರಕ್ಕೆ ಅಡ್ಡಿಯಾಗದಂತೆ ಅಗತ್ಯ ಕ್ರಮ ಕೈಗೊಂಡು ರೈತರು ಮತ್ತು ವ್ಯಾಪಾರಿಗಳ ಹಿತಾಸಕ್ತಿಯನ್ನು ರಕ್ಷಿಸಬೇಕು ಎಂದು ನಿಯೋಗ ಮನವಿ ಮಾಡಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!