ಜನ ಮನದ ನಾಡಿ ಮಿಡಿತ

Advertisement

ಕೋಝಿಕ್ಕೋಡ್: ಕೋಝಿಕ್ಕೋಡ್ ರೈಲು ನಿಲ್ದಾಣದಲ್ಲಿ ಗಡಿಯಾರ ಗೋಪುರ ಕುಸಿತ..!

ಕೇರಳದ ಐತಿಹಾಸಿಕ ಕೋಝಿಕ್ಕೋಡ್ ರೈಲು ನಿಲ್ದಾಣದಲ್ಲಿ ನವೀಕರಣ ಕಾಮಗಾರಿ ವೇಳೆ ಶತಮಾನ ಹಳೆಯ ಗಡಿಯಾರ ಗೋಪುರ ಗುರುವಾರ ಏಕಾಏಕಿ ಕುಸಿದಿದ್ದು, ಭಾರೀ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.

ಘಟನೆ ವೇಳೆ ಯಾವುದೇ ಪ್ರಯಾಣಿಕರು ಸಮೀಪದಲ್ಲಿರದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಎರಡನೇ ಪ್ಲಾಟ್‌ಫಾರ್ಮ್ ಸಮೀಪದಲ್ಲಿದ್ದ ಗೋಪುರ ಪುನರ್‌ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಎರಡು ಭಾಗಗಳಾಗಿ ಒಡೆದು ಮೂರನೇ ರೈಲು ಹಳಿಯ ಮೇಲೆ ಹಾಗೂ ಪ್ಲಾಟ್‌ಫಾರ್ಮ್ನ ಭಾಗದ ಮೇಲೆ ಕುಸಿದು ಬಿದ್ದಿದೆ. ಘಟನೆ ಸಂಭವಿಸಿದ ವೇಳೆ ಮೂರನೇ ಹಳಿಯಲ್ಲಿ ರೈಲು ನಿಂತಿದ್ದರೂ, ಅವಶೇಷಗಳು ರೈಲಿನ ಪಕ್ಕಕ್ಕೆ ಬಿದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಹಳೆಯ ಕಟ್ಟಡ ದುರ್ಬಲಗೊಂಡಿದ್ದು, ಇದೇ ಕುಸಿತಕ್ಕೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮಳೆ ಮತ್ತು ತೇವಾಂಶದಿಂದ ಕಟ್ಟಡದ ಬಲ ಕುಂದಿದಿತ್ತೇ ಎಂಬ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಬಳಿಕ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅವಶೇಷಗಳನ್ನು ತೆರವುಗೊಳಿಸಿದ್ದು, ಅವಶೇಷಗಳಡಿ ಯಾರೂ ಸಿಲುಕಿಲ್ಲ ಎಂದು ಖಚಿತಪಡಿಸಿದ್ದಾರೆ. ರೈಲ್ವೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು ರೂ.450 ಕೋಟಿ ವೆಚ್ಚದಲ್ಲಿ ಕೋಝಿಕ್ಕೋಡ್ ರೈಲು ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸುವ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಗೋಪುರ ಕುಸಿದಿರುವುದು ಕಾಮಗಾರಿ ಸುರಕ್ಷತೆ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನವೀಕರಣ ಮತ್ತು ನೆಲಸಮ ಕಾಮಗಾರಿಗಳನ್ನು ಸುರಕ್ಷತಾ ನಿಯಮಾನುಸಾರವೇ ನಡೆಸಲಾಗುತ್ತಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!