ಕೇರಳದ ಐತಿಹಾಸಿಕ ಕೋಝಿಕ್ಕೋಡ್ ರೈಲು ನಿಲ್ದಾಣದಲ್ಲಿ ನವೀಕರಣ ಕಾಮಗಾರಿ ವೇಳೆ ಶತಮಾನ ಹಳೆಯ ಗಡಿಯಾರ ಗೋಪುರ ಗುರುವಾರ ಏಕಾಏಕಿ ಕುಸಿದಿದ್ದು, ಭಾರೀ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.
ಘಟನೆ ವೇಳೆ ಯಾವುದೇ ಪ್ರಯಾಣಿಕರು ಸಮೀಪದಲ್ಲಿರದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಎರಡನೇ ಪ್ಲಾಟ್‌ಫಾರ್ಮ್ ಸಮೀಪದಲ್ಲಿದ್ದ ಗೋಪುರ ಪುನರ್‌ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಎರಡು ಭಾಗಗಳಾಗಿ ಒಡೆದು ಮೂರನೇ ರೈಲು ಹಳಿಯ ಮೇಲೆ ಹಾಗೂ ಪ್ಲಾಟ್‌ಫಾರ್ಮ್ನ ಭಾಗದ ಮೇಲೆ ಕುಸಿದು ಬಿದ್ದಿದೆ. ಘಟನೆ ಸಂಭವಿಸಿದ ವೇಳೆ ಮೂರನೇ ಹಳಿಯಲ್ಲಿ ರೈಲು ನಿಂತಿದ್ದರೂ, ಅವಶೇಷಗಳು ರೈಲಿನ ಪಕ್ಕಕ್ಕೆ ಬಿದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಹಳೆಯ ಕಟ್ಟಡ ದುರ್ಬಲಗೊಂಡಿದ್ದು, ಇದೇ ಕುಸಿತಕ್ಕೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮಳೆ ಮತ್ತು ತೇವಾಂಶದಿಂದ ಕಟ್ಟಡದ ಬಲ ಕುಂದಿದಿತ್ತೇ ಎಂಬ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಬಳಿಕ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅವಶೇಷಗಳನ್ನು ತೆರವುಗೊಳಿಸಿದ್ದು, ಅವಶೇಷಗಳಡಿ ಯಾರೂ ಸಿಲುಕಿಲ್ಲ ಎಂದು ಖಚಿತಪಡಿಸಿದ್ದಾರೆ. ರೈಲ್ವೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು ರೂ.450 ಕೋಟಿ ವೆಚ್ಚದಲ್ಲಿ ಕೋಝಿಕ್ಕೋಡ್ ರೈಲು ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸುವ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಗೋಪುರ ಕುಸಿದಿರುವುದು ಕಾಮಗಾರಿ ಸುರಕ್ಷತೆ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನವೀಕರಣ ಮತ್ತು ನೆಲಸಮ ಕಾಮಗಾರಿಗಳನ್ನು ಸುರಕ್ಷತಾ ನಿಯಮಾನುಸಾರವೇ ನಡೆಸಲಾಗುತ್ತಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…