ಪುತ್ತೂರಿನ ಚೇತನಾ ಆಸ್ಪತ್ರೆಯಲ್ಲಿ ಪ್ಲಂಬಿಂಗ್ ಕೆಲಸ ನಿರರ್ವಹಿಸುತ್ತಿದ್ದ ಕಾರ್ಮಿಕನೋರ್ವ ಆಸ್ಪತ್ರೆಯ ಒಂದನೇ ಮಹಡಿಯಿಂದ ಕೆಳಗೆ ಬಿದ್ದ ಘಟನೆ ನಡೆದಿದೆ.

ಆಸ್ಪತ್ರೆಯಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕೆಳಗೆ ಬಿದ್ದ ಕಾರ್ಮಿಕನನ್ನು ಆಸ್ಪತ್ರೆ ಸಿಬ್ಬಂದಿಗಳು ರಕ್ಷಿಸಿ ಸೂಕ್ತ ಚಿಕಿತ್ಸೆ ನೀಡಿದ್ದಾರೆ. ಒಂದನೇ ಮಹಡಿಯಿಂದ ನೇರವಾಗಿ ಪೊದೆಯೊಳಗೆ ಬಿದ್ದ ಕಾರಣ ಕಾರ್ಮಿಕನಿಗೆ ಹೆಚ್ಚಿನ ಗಾಯಗಳಾಗದೆ, ಪರಚಿದ ಗಾಯಗಳಾಗಿವೆ ಎಂದು ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.



