ಕಾಸರಗೋಡಿನ ಪ್ರಸಿದ್ಧ ಶ್ರೀ ಮಧೂರು ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಪಾರಂಪರಿಕ ಅರ್ಚಕರಾಗಿದ್ದ ವೇಣುಗೋಪಾಲ ಕಲ್ಲೂರಾಯ (78) ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಅವರು ಮಧೂರು ಮೇಲಿನ ಮನೆ ನಿವಾಸಿಯಾಗಿದ್ದರು. ಶನಿವಾರ ಬೆಳಿಗ್ಗೆ ಕುಟುಂಬದವರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ನೆರವೇರಿತು.
ವೇಣುಗೋಪಾಲ ಕಲ್ಲೂರಾಯ ಅವರು ಹಲವು ವರ್ಷಗಳಿಂದ ಮಧೂರು ಕ್ಷೇತ್ರದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಿ ಭಕ್ತರ ಅಪಾರ ಗೌರವಕ್ಕೆ ಪಾತ್ರರಾಗಿದ್ದರು. ಧಾರ್ಮಿಕ ಸೇವೆಯೊಂದಿಗೆ ಸಮಾಜಮುಖಿ ಚಟುವಟಿಕೆಗಳಲ್ಲಿಯೂ ಸಕ್ರಿಯರಾಗಿದ್ದ ಅವರು ಶಿವಳ್ಳಿ ಬ್ರಾಹ್ಮಣ ಸಭೆ ಕಾಸರಗೋಡು ವಲಯ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಕೇಂದ್ರ ಸಮಿತಿಯ ಮಾಜಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಸಮುದಾಯದ ಸಂಘಟನೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದರು.
ನಿವೃತ್ತ ಶಿಕ್ಷಕರಾಗಿದ್ದ ಅವರು ಹವ್ಯಾಸಿ ಯಕ್ಷಗಾನ ಕಲಾವಿದ ಹಾಗೂ ಸಂಗೀತ ವಿದ್ವಾಂಸರಾಗಿಯೂ ಹೆಸರುವಾಸಿಯಾಗಿದ್ದರು. ಪೌರೋಹಿತ್ಯ ಕ್ಷೇತ್ರದಲ್ಲಿ ಅಪಾರ ಅನುಭವ ಮತ್ತು ಗೌರವ ಗಳಿಸಿದ್ದ ಅವರು ತಮ್ಮ ಸೇವಾ ಮನೋಭಾವದಿಂದ ಸಮಾಜದಲ್ಲಿ ವಿಶಿಷ್ಟ ಸ್ಥಾನವನ್ನು ಸಂಪಾದಿಸಿದ್ದರು.
ಮೃತರು ಪತ್ನಿ ಕಮಲಾಕ್ಷಿ (ಸೀಮಾ), ಪುತ್ರರಾದ ವಸಂತ ಕಲ್ಲೂರಾಯ (ಮಧೂರು ಕ್ಷೇತ್ರದ ಅರ್ಚಕ) ಹಾಗೂ ಕಿಶೋರ್ (ಹರಿ ಕೇಶವ ಕಲ್ಲೂರಾಯ), ಉಡುಪಿ ಕಾಲೇಜಿನ ಉಪನ್ಯಾಸಕ, ಸೊಸೆ ಕಾವ್ಯಶ್ರೀ, ಸಹೋದರ ಬಾಲಚಂದ್ರ ಕಲ್ಲೂರಾಯ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…