ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶುದ್ಧ ಕುಡಿಯುವ ನೀರಿನ ಘಟಕದ ಆವರಣಕ್ಕೆ ಢಿಕ್ಕಿ ಹೊಡೆದ ಕಾರು…!

ಮಣಿಪಾಲದ ಈಶ್ವರ ನಗರದಲ್ಲಿರುವ ನಗರಸಭೆಯ ಶುದ್ಧ ಕುಡಿಯುವ ನೀರಿನ ಘಟಕದ ಆವರಣಕ್ಕೆ ಮಧ್ಯರಾತ್ರಿ ಕಾರೊಂದು ನುಗ್ಗಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ.

ಮಣಿಪಾಲದಿಂದ ಆತ್ರಾಡಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 169ಂ ಮೂಲಕ ಸಾಗುತ್ತಿದ್ದ ಕಾರು ದಾರಿ ತಪ್ಪಿ ಹೆದ್ದಾರಿಯಿಂದ ಹೊರಬಂದು ನೇರವಾಗಿ ಕುಡಿಯುವ ನೀರಿನ ಘಟಕದೊಳಗೆ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಏರ್‌ಬ್ಯಾಗ್‌ಗಳು ತೆರೆದಿದ್ದು, ಕಾರಿನಲ್ಲಿದ್ದವರಿಗೆ ತಲೆಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದದ್ದು ತಿಳಿದುಬಂದಿದೆ. ಸ್ಥಳೀಯರ ಪ್ರಕಾರ, ಇದೇ ಸ್ಥಳದಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ರಾಷ್ಟ್ರೀಯ ಹೆದ್ದಾರಿ 169ಂ ಕಾಮಗಾರಿ ಅಪೂರ್ಣವಾಗಿರುವುದು, ಅಗತ್ಯ ತಡೆಗೋಡೆ ಹಾಗೂ ಎಚ್ಚರಿಕೆ ವ್ಯವಸ್ಥೆಗಳ ಕೊರತೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!