ಮಣಿಪಾಲದ ಈಶ್ವರ ನಗರದಲ್ಲಿರುವ ನಗರಸಭೆಯ ಶುದ್ಧ ಕುಡಿಯುವ ನೀರಿನ ಘಟಕದ ಆವರಣಕ್ಕೆ ಮಧ್ಯರಾತ್ರಿ ಕಾರೊಂದು ನುಗ್ಗಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ.
ಮಣಿಪಾಲದಿಂದ ಆತ್ರಾಡಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 169ಂ ಮೂಲಕ ಸಾಗುತ್ತಿದ್ದ ಕಾರು ದಾರಿ ತಪ್ಪಿ ಹೆದ್ದಾರಿಯಿಂದ ಹೊರಬಂದು ನೇರವಾಗಿ ಕುಡಿಯುವ ನೀರಿನ ಘಟಕದೊಳಗೆ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಏರ್‌ಬ್ಯಾಗ್‌ಗಳು ತೆರೆದಿದ್ದು, ಕಾರಿನಲ್ಲಿದ್ದವರಿಗೆ ತಲೆಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದದ್ದು ತಿಳಿದುಬಂದಿದೆ. ಸ್ಥಳೀಯರ ಪ್ರಕಾರ, ಇದೇ ಸ್ಥಳದಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ರಾಷ್ಟ್ರೀಯ ಹೆದ್ದಾರಿ 169ಂ ಕಾಮಗಾರಿ ಅಪೂರ್ಣವಾಗಿರುವುದು, ಅಗತ್ಯ ತಡೆಗೋಡೆ ಹಾಗೂ ಎಚ್ಚರಿಕೆ ವ್ಯವಸ್ಥೆಗಳ ಕೊರತೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಲಾಗಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…