ಕಡಬ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ, ಬಿಸಿಐ ಕಾರ್ಯದರ್ಶಿ ಜಯ ಶಾ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜೂನ್ 30 ರಂದು ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು.
ಪತ್ನಿ ಸಮೇತ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಸಂಕಲ್ಪ ನೆರವೇರಿಸಿದರು. ದೇಶ-ವಿದೇಶಗಳಲ್ಲಿ ಪ್ರಸಿದ್ಧಿ ಪಡೆದಿರುವ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆದಿದ್ದು ಅತೀವ ಸಂತಸ ತಂದಿದೆ. ಶ್ರೀ ದೇವರ ದರ್ಶನ ಪಡೆದು ಸೇವೆ ಸಲ್ಲಿಸಿದ್ದೇನೆ. ಉತ್ತಮ ವ್ಯವಸ್ಥೆ ಮಾಡಿದ ಶ್ರೀ ದೇವಳದ ಅಧ್ಯಕ್ಷರು, ಸದಸ್ಯರು ಮತ್ತು ವ್ಯವಸ್ಥಾಪನಾ ಸಮಿತಿಯವರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿಗೆ ಭೇಟಿ ನೀಡಿದ ನಂತರ ಶ್ರೀ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಮ ಸುಳ್ಳಿ ಅವರು ಶಾಲು ಹೊದಿಸಿ ಪ್ರಸಾದ ನೀಡಿ ಜಯ್ ಶಾ ಅವರನ್ನು ಸನ್ಮಾನಿಸಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ ಮಡ್ತಿಲ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಕ್ಯಾಂಪ್ಕೋ ನಿರ್ದೇಶಕರು, ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪುಷ್ಪಲತಾ ರಾವ್, ಶಿಷ್ಟಾಚಾರ ವಿಭಾಗದ ಪ್ರಸನ್ನ ದರ್ಬೆ, ಶೋಭಾ ಗಿರಿಧರ್, ಪ್ರಮೋದ್ ಕುಮಾರ್ ಇದ್ದರು. ಎಸ್ ಮತ್ತು ಮನೋಜ್ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.



