ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ….!

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯಲ್ಲಿ ರಾಷ್ಟ್ರೀಯ ತನಿಖಾ ದಳ ಮಹತ್ವದ ಯಶಸ್ಸು ಸಾಧಿಸಿದೆ.

ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಕೆಗುಡ್ಡೆ ನಿವಾಸಿ ನೌಶಾದ್ ಅವರನ್ನು ಬೆಂಗಳೂರಿನಲ್ಲಿ ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರೋಡ್ ನಿವಾಸಿ ಅಬ್ದುಲ್ ನಾಸಿರ್ ಅವರನ್ನು ಕೇರಳದ ಕೊಚ್ಚಿಯಲ್ಲಿ ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೊಲೆ ಕೃತ್ಯ ಎಸಗಿದ್ದ ಪ್ರಮುಖ ಆರೋಪಿಗಳಿಗೆ ಮೈಸೂರು, ಚಾಮರಾಜನಗರ ಹಾಗೂ ತಮಿಳುನಾಡಿನ ಈರೋಡ್‌ನಲ್ಲಿ ಆಶ್ರಯ ಮತ್ತು ತಲೆಮರೆಸಿಕೊಳ್ಳಲು ನೆರವು ನೀಡಿದ ಆರೋಪ ಇವರ ಮೇಲಿದೆ. ಪ್ರಕರಣದಲ್ಲಿ ಒಟ್ಟು 27 ಮಂದಿಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದ್ದು, ತನಿಖೆಯ ವೇಳೆ ಎನ್‌ಐಎ ಅಧಿಕಾರಿಗಳು ಬಹುತೇಕ ಆರೋಪಿಗಳನ್ನು ಬಂಧಿಸಿದ್ದರು. ಆದರೆ ಆರು ಮಂದಿ ದೀರ್ಘಕಾಲ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವರ ಸುಳಿವು ನೀಡುವವರಿಗೆ ಬಹುಮಾನವನ್ನೂ ಘೋಷಿಸಲಾಗಿತ್ತು. ಈ ಮಧ್ಯೆ, ಸೋಮವಾರಪೇಟೆ ಹಾನಗಲ್ಲು ನಿವಾಸಿ ಮತ್ತೋರ್ವ ಆರೋಪಿ ಅಬ್ದುಲ್ ನಾಸಿರ್ ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಗಳ ವಿರುದ್ಧ ತನಿಖೆಯನ್ನು ಮುಂದುವರಿಸಿದ್ದ ಎನ್‌ಐಎ, 2025ರ ಏಪ್ರಿಲ್‌ನಲ್ಲಿ ನಾಲ್ವರು ಪರಾರಿಯಾಗಿದ್ದ ಆರೋಪಿಗಳ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಸಿತ್ತು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!