ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯಲ್ಲಿ ರಾಷ್ಟ್ರೀಯ ತನಿಖಾ ದಳ ಮಹತ್ವದ ಯಶಸ್ಸು ಸಾಧಿಸಿದೆ.
ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಕೆಗುಡ್ಡೆ ನಿವಾಸಿ ನೌಶಾದ್ ಅವರನ್ನು ಬೆಂಗಳೂರಿನಲ್ಲಿ ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರೋಡ್ ನಿವಾಸಿ ಅಬ್ದುಲ್ ನಾಸಿರ್ ಅವರನ್ನು ಕೇರಳದ ಕೊಚ್ಚಿಯಲ್ಲಿ ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೊಲೆ ಕೃತ್ಯ ಎಸಗಿದ್ದ ಪ್ರಮುಖ ಆರೋಪಿಗಳಿಗೆ ಮೈಸೂರು, ಚಾಮರಾಜನಗರ ಹಾಗೂ ತಮಿಳುನಾಡಿನ ಈರೋಡ್‌ನಲ್ಲಿ ಆಶ್ರಯ ಮತ್ತು ತಲೆಮರೆಸಿಕೊಳ್ಳಲು ನೆರವು ನೀಡಿದ ಆರೋಪ ಇವರ ಮೇಲಿದೆ. ಪ್ರಕರಣದಲ್ಲಿ ಒಟ್ಟು 27 ಮಂದಿಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದ್ದು, ತನಿಖೆಯ ವೇಳೆ ಎನ್‌ಐಎ ಅಧಿಕಾರಿಗಳು ಬಹುತೇಕ ಆರೋಪಿಗಳನ್ನು ಬಂಧಿಸಿದ್ದರು. ಆದರೆ ಆರು ಮಂದಿ ದೀರ್ಘಕಾಲ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವರ ಸುಳಿವು ನೀಡುವವರಿಗೆ ಬಹುಮಾನವನ್ನೂ ಘೋಷಿಸಲಾಗಿತ್ತು. ಈ ಮಧ್ಯೆ, ಸೋಮವಾರಪೇಟೆ ಹಾನಗಲ್ಲು ನಿವಾಸಿ ಮತ್ತೋರ್ವ ಆರೋಪಿ ಅಬ್ದುಲ್ ನಾಸಿರ್ ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಗಳ ವಿರುದ್ಧ ತನಿಖೆಯನ್ನು ಮುಂದುವರಿಸಿದ್ದ ಎನ್‌ಐಎ, 2025ರ ಏಪ್ರಿಲ್‌ನಲ್ಲಿ ನಾಲ್ವರು ಪರಾರಿಯಾಗಿದ್ದ ಆರೋಪಿಗಳ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಸಿತ್ತು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…