ಪಬ್ ಒಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ, ಕನಿಷ್ಠ 27 ಜನ ಸಾವನ್ನಪ್ಪಿ, 63 ಜನರು ಗಾಯಗೊಂಡಿರುವ ಘಟನೆ ಥೈಲ್ಯಾಂಡ್ ರಾಜಧಾನಿಯ ಬ್ಯಾಂಕಾಕ್‌ನಲ್ಲಿ ಸೋಮವಾರ ಬೆಳಗಿನ ಜಾವ ಸಂಭವಿಸಿದೆ.
ನಗರದ ಉತ್ತರ ಭಾಗದ ಚತುಚಕ್ ಜಿಲ್ಲೆಯ ರೋಂಗ್ ಬೀರ್ ನಾ ಲಾಟ್ ಫ್ರಾವೊ ಪಬ್‌ವೊಂದರಲ್ಲಿ ಮಧ್ಯರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಭಾರಿ ಬೆಂಕಿ ಮತ್ತು ವಿಷಕಾರಿ ಹೊಗೆಯೊಳಗೆ ಸಿಲುಕಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡ 63 ಜನರ ಪೈಕಿ 22 ಜನರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯ ಸಂಪೂರ್ಣ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಡಿಯೋದಲ್ಲಿ ನೈಟ್‌ಕ್ಲಬ್‌ನ ಮುಖ್ಯ ಬಾಗಿಲಿನಿಂದ ಬೆಂಕಿಯ ಜ್ವಾಲೆಗಳು ಮತ್ತು ದಟ್ಟವಾದ ಕಪ್ಪು ಹೊಗೆ ಆಕಾಶ ಮುಟ್ಟುತ್ತಿರುವುದು ಹಾಗೂ ಪ್ರಾಣ ಉಳಿಸಿಕೊಳ್ಳಲು ಯುವಕ-ಯುವತಿಯರು ದಿಕ್ಕಾಪಾಲಾಗಿ ಓಡುತ್ತಿರುವುದನ್ನು ಕಾಣಬಹುದಾಗಿದೆ. ಘಟನಾ ಸ್ಥಳಕ್ಕೆ ಥೈಲ್ಯಾಂಡ್ ಪ್ರಧಾನಿ ಅನುಟಿನ್ ಚಾರ್ನ್ವಿರಕುಲ್ ಭೇಟಿ ನೀಡಿದ್ದು, “27 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ” ಎಂದು ತಿಳಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…