ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಮಿನೇಜಸ್ ಪ್ಲಾಜಾದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನದ ಯತ್ನ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಬ್ಯಾಂಕ್ ಶಾಖೆಯ ಮೇಲಿರುವ ಕೊಠಡಿಯ ಸ್ಲ್ಯಾಬ್‌ಗೆ ತೂತು ಮಾಡಿ ಒಳನುಗ್ಗಲು ಯತ್ನಿಸಿರುವುದು ಪತ್ತೆಯಾಗಿದೆ. ಆದರೆ ಬ್ಯಾಂಕ್‌ನಿಂದ ಯಾವುದೇ ಹಣ ಅಥವಾ ಇತರೆ ವಸ್ತುಗಳು ಕಳವಾಗಿರುವ ಬಗ್ಗೆ ಈವರೆಗೆ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕುಮಾರ್, ಬಂಟ್ವಾಳ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅನಂತ ಪದ್ಮನಾಭ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್.ಐ. ಮಂಜುನಾಥ್ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…