ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿ ಎರಡು ಕಡೆ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ನಾಲ್ವರು ಅಪ್ರಾಪ್ತ ಬಾಲಕರು ಸಹಿತ 11 ಮಂದಿ ಬಾಂಗ್ಲಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಮುಹಮ್ಮದ್ ಕೌಸರ್ ಅಲಿ, ಮುಹಮ್ಮದ್ ನೂರ್ ಅಮೀನ್, ಮುಹಮ್ಮದ್ ನಾಹಿದುಲ್ ಇಸ್ಲಾಂ, ಮುಹಮ್ಮದ್ ಹುಮಾಯೂನ್ ಕಬೀರ್, ಮುಹಮ್ಮದ್ ರಂಝಾನ್ ಅಲಿ, ಮುಹಮ್ಮದ್ ಅಬ್ದುಲ್ ರಹ್ಮಾನ್ ರಾಯಲ್, ಮುಹಮ್ಮದ್ ನೋಯಾನ್ ಮತ್ತು ನಾಲ್ವರು ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ಕಡೆ ಮೂವರು ಹಾಗೂ ಮತ್ತೊಂದು ಕಡೆಯಲ್ಲಿ ಎಂಟು ಮಂದಿ ಬಾಂಗ್ಲಾ ಪ್ರಜೆಗಳು ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಬಾಂಗ್ಲಾ ಪ್ರಜೆಗಳನ್ನು ಅವರ ಸ್ವದೇಶಕ್ಕೆ ಗಡಿಪಾರು ಮಾಡಲು ಅಗತ್ಯವಿರುವ ಆದೇಶ ಕೋರಿ ವಿದೇಶೀಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಶೀಘ್ರದಲ್ಲೇ ವರದಿ ಸಲ್ಲಿಸಲಾಗುವುದು. ಸದ್ಯ ಬಂಧಿತರ ಬಳಿ ಇರುವ ದಾಖಲೆಗಳ ಸಂಗ್ರಹಣೆ ಹಾಗೂ ಪರಿಶೀಲನಾ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಇದರೊಂದಿಗೆ ಒಟ್ಟು 19 ಮಂದಿ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಏತನ್ಮಧ್ಯೆ ಮಧ್ಯವರ್ತಿ ವಿರುದ್ಧ ಪ್ರಕರಣ ದಾಖಲಿಸಲು ಸಿದ್ಧತೆಮಾಡಲಾಗಿದೆ. ಭಾರತದ ಇತರ ರಾಜ್ಯಗಳ ಕಾರ್ಮಿಕರ ಜೊತೆಯಲ್ಲಿ ಈ ಬಾಂಗ್ಲಾ ಪ್ರಜೆಗಳನ್ನು ಮಂಗಳೂರಿಗೆ ಕರೆತಂದು ಕೆಲಸಕ್ಕೆ ಸೇರಿಸಿದ್ದ ಪಶ್ಚಿಮ ಬಂಗಾಳ ಮೂಲದ ಮಧ್ಯವರ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…