ಬಂಟ್ವಾಳ ಸಮೀಪದ ದೇವಸ್ಯಪಡೂರು ಗ್ರಾಮದ ಅಲ್ಲಿಪಾದೆ ಬಳಿಯ ಅತ್ತಳಿಕೆ ಪ್ರದೇಶದಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮೃತರನ್ನು ಕಾವಳಪಡೂರು ನಿವಾಸಿ ಪ್ರಮೋದ್ ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಸುನಿಲ್ ಹಾಗೂ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಲ್ಲಿನ ಕೋರೆಯಿಂದ ಕೆಂಪುಕಲ್ಲು ತುಂಬಿಸಿಕೊಂಡು ಬರುತ್ತಿದ್ದ ವೇಳೆ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಸ್ಥಳೀಯರ ಮಾಹಿತಿ ಪ್ರಕಾರ ಬ್ರೇಕ್ ವೈಫಲ್ಯ ಸಂಭವಿಸಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಅಪಘಾತದ ನಿಖರ ಕಾರಣವು ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ. ಲಾರಿ ಸಂಪೂರ್ಣ ಮಗುಚಿ ಬಿದ್ದ ಪರಿಣಾಮ ಅದರಡಿ ಸಿಲುಕಿದ್ದ ಪ್ರಮೋದ್ ಹಾಗೂ ಕೃಷ್ಣಪ್ಪ ಅವರನ್ನು ಜೆಸಿಬಿ ಯಂತ್ರದ ಸಹಾಯದಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಪ್ರಮೋದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸ್ ಠಾಣೆಯ ಎಸ್‌ಐ ಆದರ್ಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…