ಬಿ.ಸಿ.ರೋಡ್ ನಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬರನ್ನು ಮಾರಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಗುರುವಾರ ವರದಿಯಾಗಿದೆ.
ಮೃತ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಲಭ್ಯವಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಲಾವಣ್ಯ ಅವರು ಕಕ್ಯಪದವು ಕಡೆಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕುಳಿತಿದ್ದರು ಎನ್ನಲಾಗಿದೆ. ಈ ವೇಳೆ ಅವರು ತಮ್ಮ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ, “ತನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ” ಎಂದು ತಿಳಿಸಿದ್ದು, ಬಳಿಕ ಕರೆ ಸಂಪರ್ಕ ಕಡಿತಗೊಂಡಿದೆ ಎಂದು ಹೇಳಲಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರ ಮಾಹಿತಿ ಪ್ರಕಾರ, ಬಳಿಕ ಯುವತಿ ಬಸ್‌ನಿಂದ ಕೆಳಗಿಳಿದಿದ್ದಾರೆ. ಅವರು ಇಳಿದ ತಕ್ಷಣ ಯುವಕ ಆಕೆಯನ್ನು ಬೆನ್ನಟ್ಟಿದನು ಎನ್ನಲಾಗಿದ್ದು, ತನ್ನ ಬ್ಯಾಗ್‌ನಿಂದ ಹರಿತವಾದ ಆಯುಧವನ್ನು ಹೊರತೆಗೆದಾಗ ಯುವತಿ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ವೇಳೆ ಯುವತಿಯ ಮೇಲೆ ಮಾರಕ ಹಲ್ಲೆ ನಡೆಸಿ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಉಪವಿಭಾಗದ ಪೊಲೀಸ್ ಅಧಿಕಾರಿಗಳು, ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದು, ಘಟನೆಯ ನಿಖರ ಕಾರಣ ಮತ್ತು ಹಿನ್ನೆಲೆಯ ಕುರಿತು ತನಿಖೆ ಮುಂದುವರಿದಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…