ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಲಾವಣ್ಯ ಕೊಲೆ ಪ್ರಕರಣಕ್ಕೆ ಬಿಗ್ ಬ್ರೇಕ್: ಚೇತನ್ ಗೌಡ ಬಂಧನ..!

ಲಾವಣ್ಯ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಪರಾರಿಯಾಗಿದ್ದ ಪ್ರಮುಖ ಆರೋಪಿ ಚೇತನ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ಬಳಿಕ ಆರೋಪಿಯನ್ನು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆ ಕೃತ್ಯ ಎಸಗಿದ ಬಳಿಕ ಆತ ವಿಷಪದಾರ್ಥ ಸೇವಿಸಿರಬಹುದೆಂಬ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಆರೋಪಿಯ ಆರೋಗ್ಯ ಸ್ಥಿತಿ ಕುರಿತು ವೈದ್ಯರು ನಿಗಾ ವಹಿಸಿದ್ದು, ಪರೀಕ್ಷೆಯ ವರದಿ ಬಂದ ಬಳಿಕ ಸ್ಪಷ್ಟ ಚಿತ್ರಣ ಲಭ್ಯವಾಗುವ ಸಾಧ್ಯತೆಯಿದೆ. ಇನ್ನೊಂದೆಡೆ, ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಕೊಲೆ ನಡೆದ ಸಂದರ್ಭದ ವಿವರಗಳು, ಆರೋಪಿಯ ಚಲನವಲನಗಳು ಹಾಗೂ ಘಟನೆಯ ಹಿನ್ನಲೆ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ವೈದ್ಯಕೀಯ ವರದಿ ಮತ್ತು ಆರೋಪಿಯ ವಿಚಾರಣೆಯ ಬಳಿಕ ಪ್ರಕರಣಕ್ಕೆ ಸಂಬAಧಿಸಿದ ಮತ್ತಷ್ಟು ಮಹತ್ವದ ಮಾಹಿತಿಗಳು ಬಹಿರಂಗವಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!