ಜನ ಮನದ ನಾಡಿ ಮಿಡಿತ

Advertisement

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಸುಟ್ಟುಹೋದ ಘಟನೆ ನಡೆದಿದೆ.

ಸಮಯಪ್ರಜ್ಞೆ ಪ್ರದರ್ಶಿಸಿದ ಚಾಲಕ ಹಾಗೂ ಸ್ಥಳೀಯರ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಗೋಳಿತ್ತೊಟ್ಟು ಶಿರಾಡಿಗುಡ್ಡೆ ಸಮೀಪ ತಲುಪುತ್ತಿದ್ದ ವೇಳೆ ಕಾರಿನ ಇಂಜಿನ್ ಭಾಗದಿಂದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಬೆಂಗಳೂರು ನಿವಾಸಿ ಲೋಕೇಶ್ ತಕ್ಷಣ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ, ತನ್ನ ಸಹೋದರನೊಂದಿಗೆ ಕಾರಿನಿಂದ ಕೆಳಗಿಳಿದು ಸುರಕ್ಷಿತವಾಗಿ ಪಾರಾಗಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿದ್ದು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಕೆಎನ್‌ಆರ್ ಕಂಪನಿಯ ಟ್ಯಾಂಕರ್ ಅನ್ನು ಸ್ಥಳಕ್ಕೆ ಕರೆಸಿ ನೀರು ಸಿಂಪಡಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಆದಾಗ್ಯೂ, ಕಾರಿನ ಇಂಜಿನ್ ಇರುವ ಮುಂಭಾಗ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪುತ್ತೂರು ಸಂಚಾರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!