ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಸುಟ್ಟುಹೋದ ಘಟನೆ ನಡೆದಿದೆ.
ಸಮಯಪ್ರಜ್ಞೆ ಪ್ರದರ್ಶಿಸಿದ ಚಾಲಕ ಹಾಗೂ ಸ್ಥಳೀಯರ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಗೋಳಿತ್ತೊಟ್ಟು ಶಿರಾಡಿಗುಡ್ಡೆ ಸಮೀಪ ತಲುಪುತ್ತಿದ್ದ ವೇಳೆ ಕಾರಿನ ಇಂಜಿನ್ ಭಾಗದಿಂದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಬೆಂಗಳೂರು ನಿವಾಸಿ ಲೋಕೇಶ್ ತಕ್ಷಣ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ, ತನ್ನ ಸಹೋದರನೊಂದಿಗೆ ಕಾರಿನಿಂದ ಕೆಳಗಿಳಿದು ಸುರಕ್ಷಿತವಾಗಿ ಪಾರಾಗಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿದ್ದು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಕೆಎನ್‌ಆರ್ ಕಂಪನಿಯ ಟ್ಯಾಂಕರ್ ಅನ್ನು ಸ್ಥಳಕ್ಕೆ ಕರೆಸಿ ನೀರು ಸಿಂಪಡಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಆದಾಗ್ಯೂ, ಕಾರಿನ ಇಂಜಿನ್ ಇರುವ ಮುಂಭಾಗ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪುತ್ತೂರು ಸಂಚಾರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…