ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಉಕ್ಕುಡ ಬಳಿ ನಡೆದಿದೆ.
ಗಾಯಾಳುಗಳನ್ನು ಪುತ್ತೂರು ಮೂಲದ ದಿನೇಶ್ ಮತ್ತು ಅಂಕಿತ್ ಎಂದು ಗುರುತಿಸಲಾಗಿದೆ. ವಿಟ್ಲ-ಅಡ್ಯನಡ್ಕ ರಸ್ತೆಯ ಉಕ್ಕುಡ ದರ್ಬೆ ಎಂಬಲ್ಲಿನ ಅಪಾಯಕಾರಿ ರಸ್ತೆ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಉಕ್ಕುಡ ಕಡೆಯಿಂದ ಕುದ್ದುಪದವು ಕಡೆಗೆ ಸಂಚರಿಸುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಟಿಪ್ಪರ್ ಲಾರಿಯ ಮುಂಭಾಗ ಜಖಂಗೊಂಡಿದ್ದು, ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಇಬ್ಬರೂ ಕ್ಯಾಬಿನ್‌ನಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಗಾಯಾಳುಗಳನ್ನು ಲಾರಿಯಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದಾರೆ. ಅಪಘಾತಕ್ಕೀಡಾದ ಲಾರಿ ಉಪ್ಪಿನಂಗಡಿ ನಿವಾಸಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…