ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ ವೇಳೆ ಬೆಳಕಿಗೆ ಬಂದಿದೆ.
ಸೂರಿಕುಮೇರ್ ಪೆಟ್ರೋಲ್ ಬಂಕ್ ಬಳಿಯ ಹೋಟೆಲ್ ಮುಂಭಾಗದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿತು. ಕಾರಿನೊಳಗೆ ಮಗು, ಮಹಿಳೆ ಹಾಗೂ ಚಾಲಕ ಸಿಲುಕಿಕೊಂಡಿದ್ದರು. ಕ್ಷಣಾರ್ಧದಲ್ಲಿ ನೆರವು ಸಿಗದಿದ್ದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇತ್ತು. ಅದೇ ಸಮಯದಲ್ಲಿ ಸಮೀಪದಲ್ಲೇ ಮತ್ತೊಂದು ಪ್ರಮುಖ ಪ್ರಕರಣದ ಸಂಬಂಧ ಕರ್ತವ್ಯ ನಿರ್ವಹಿಸುತ್ತಿದ್ದ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಹಾಗೂ ಸಿಬ್ಬಂದಿ ಕರಣಾಕರ ಅವರಿಗೆ ಅಪಘಾತದ ಭಾರೀ ಶಬ್ದ ಕೇಳಿಬಂದ ತಕ್ಷಣ ಯಾವುದೇ ಕ್ಷಣವನ್ನೂ ವ್ಯರ್ಥ ಮಾಡದೆ ಸ್ಥಳಕ್ಕೆ ಧಾವಿಸಿದ್ದಾರೆ. ಪ್ರಾಣದ ಹಂಗು ತೊರೆದು ಕಾರಿನೊಳಗೆ ಸಿಲುಕಿದ್ದ ಮಗು, ಮಹಿಳೆ ಹಾಗೂ ಚಾಲಕನನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಿಸುವಲ್ಲಿ ಎಸ್‌ಐ ರಾಮಕೃಷ್ಣ ಅವರು ಅಸಾಧಾರಣ ಸಮಯಪ್ರಜ್ಞೆ ಮತ್ತು ಧೈರ್ಯ ಪ್ರದರ್ಶಿಸಿದ್ದಾರೆ. ವಿಶೇಷವಾಗಿ ಅಳುತ್ತಿದ್ದ ಪುಟ್ಟ ಮಗುವನ್ನು ತಮ್ಮ ಕೈಯಲ್ಲಿ ಎತ್ತಿಕೊಂಡು ಸುರಕ್ಷಿತ ಸ್ಥಳಕ್ಕೆ ಕರೆತಂದ ದೃಶ್ಯ ಸಮೀಪದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಅದನ್ನು ಕಂಡ ಸಾರ್ವಜನಿಕರು ಪೊಲೀಸ್ ಅಧಿಕಾರಿಯ ಮಾನವೀಯತೆಗೆ ಮನಸಾರೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…