ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲೇ ವ್ಯಾಪಿಸಿದ ಪರಿಣಾಮ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಸ್ಥಳೀಯ ನಿವಾಸಿಗಳು ಸಮಯಪ್ರಜ್ಞೆ ಮೆರೆದು ಕೊಟ್ಟಿಗೆಯೊಳಗಿದ್ದ ದನಗಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದರಿಂದ ಯಾವುದೇ ಜಾನುವಾರುಗಳಿಗೆ ಅಪಾಯ ಸಂಭವಿಸಿಲ್ಲ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಇದರಿಂದ ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ತಡೆಯಲು ಸಾಧ್ಯವಾಯಿತು. ಅಗ್ನಿ ಅವಘಡದಲ್ಲಿ ಸುಮಾರು 4 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಗ್ರಾಮ ಕರಣಿಕರ ಸಹಾಯಕರು ಹಾಗೂ ಮಾಜಿ ಪಂಚಾಯತ್ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…