ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ ನಿಧನರಾದರು.
ತಿರುಪತಿ ಯಾತ್ರೆ ಮುಗಿಸಿ ಸೋಮವಾರ ಮಂತ್ರಾಲಯದತ್ತ ಸಂಚರಿಸುತ್ತಿದ್ದಾಗ ಮಂತ್ರಾಲಯ ಸಮೀಪವಾಗುತ್ತಿದಂತೆ ಕೇವಲ ಒಂದೆರಡು ಕಿಲೋಮೀಟರ್ ಅಂತರದಲ್ಲಿ ರವಿ ಶೆಟ್ಟಿಯವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪುರುಷೋತ್ತಮ ಭಂಡಾರಿ, ಸುದೇಶ್ ರೈ ಮತ್ತು ಪ್ರದೀಪ್ ಆಳ್ವ ಪ್ರಾಣಾಪಾಯದಿಂದ ಪಾರಾಗಿದ್ದು, ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರವಿ ಶೆಟ್ಟಿ ಅಶೋಕ್ ನಗರ ಅವರು ಮಂಗಳೂರು ಹಾಪ್ ಕಾಮ್ಸ್ ಉದ್ಯೋಗಿಯಾಗಿದ್ದು, ಯಕ್ಷದ್ರುವ ಪಟ್ಲ ಫೌಂಡೇಶನ್‌ನ ಜೊತೆ ಕಾರ್ಯದರ್ಶಿಯಾಗಿದ್ದರು. ಮಾತ್ರವಲ್ಲದೆ, ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಓರ್ವ ಪುತ್ರ ಮತ್ತು ಪುತ್ರಿಯರನ್ನು ಅಗಲಿದ್ದಾರೆ. ಅಲ್ಲದೆ ಹಲವಾರು ಮಂದಿ ರವಿ ಶೆಟ್ಟಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ…