ಜನ ಮನದ ನಾಡಿ ಮಿಡಿತ

Advertisement

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ ಪ್ರತಿಭಟನೆಯ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರವಾನಿಸಿರುವುದಾಗಿ ಅವರು ಸಾಮಾಜಿಕ ಜಾಲತಾಣದ ಮೂಲಕ ಅಧಿಕೃತವಾಗಿ ಘೋಷಿಸಿದ್ದು, ನಿರ್ಧಾರಕ್ಕೆ ಕಾರಣಗಳನ್ನೂ ಸುದೀರ್ಘವಾಗಿ ವಿವರಿಸಿದ್ದಾರೆ. ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲದಿಂದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ಶ್ರಮಿಸಿರುವುದಾಗಿ ಪತ್ರದಲ್ಲಿ ಸ್ಮರಿಸಿರುವ ಅವರು, ಸಶಕ್ತ, ಸರ್ವವ್ಯಾಪಿ ಹಾಗೂ ದೂರದೃಷ್ಟಿಯ ಶಿಕ್ಷಣ ವ್ಯವಸ್ಥೆಯೇ ರಾಷ್ಟ್ರದ ಅಭಿವೃದ್ಧಿಗೆ ಅಡಿಪಾಯ ಎಂದು ಪ್ರತಿಪಾದಿಸಿದ್ದಾರೆ. ಇದೇ ವೇಳೆ ಪರೀಕ್ಷಾ ಅಕ್ರಮದ ಕುರಿತು ಸ್ಪಷ್ಟನೆ ನೀಡಿರುವ ಧರ್ಮೇಂದ್ರ ಪ್ರಧಾನ್, “ಮೇ 3, 2026ರಂದು ನಡೆದ ನೀಟ್-ಯುಜಿ ಪರೀಕ್ಷೆಯಲ್ಲಿ ಅಕ್ರಮಗಳ ದೂರು ಬಂದ ತಕ್ಷಣವೇ ಸರ್ಕಾರ ಕ್ಷಿಪ್ರ ಕ್ರಮ ಕೈಗೊಂಡಿತ್ತು. ಪ್ರಕರಣದ ತನಿಖೆಯನ್ನು ತಕ್ಷಣವೇ ಸಿಬಿಐಗೆ ಹಸ್ತಾಂತರಿಸಲಾಯಿತಲ್ಲದೆ, ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆ ನಡೆಸಲು ತೀರ್ಮಾನಿಸಲಾಯಿತು. ಭವಿಷ್ಯದಲ್ಲಿ ಇಂತಹ ಅಕ್ರಮ ತಡೆಯಲು ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ (CBT) ಮಾದರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!