ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ ಪ್ರತಿಭಟನೆಯ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರವಾನಿಸಿರುವುದಾಗಿ ಅವರು ಸಾಮಾಜಿಕ ಜಾಲತಾಣದ ಮೂಲಕ ಅಧಿಕೃತವಾಗಿ ಘೋಷಿಸಿದ್ದು, ನಿರ್ಧಾರಕ್ಕೆ ಕಾರಣಗಳನ್ನೂ ಸುದೀರ್ಘವಾಗಿ ವಿವರಿಸಿದ್ದಾರೆ. ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲದಿಂದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ಶ್ರಮಿಸಿರುವುದಾಗಿ ಪತ್ರದಲ್ಲಿ ಸ್ಮರಿಸಿರುವ ಅವರು, ಸಶಕ್ತ, ಸರ್ವವ್ಯಾಪಿ ಹಾಗೂ ದೂರದೃಷ್ಟಿಯ ಶಿಕ್ಷಣ ವ್ಯವಸ್ಥೆಯೇ ರಾಷ್ಟ್ರದ ಅಭಿವೃದ್ಧಿಗೆ ಅಡಿಪಾಯ ಎಂದು ಪ್ರತಿಪಾದಿಸಿದ್ದಾರೆ. ಇದೇ ವೇಳೆ ಪರೀಕ್ಷಾ ಅಕ್ರಮದ ಕುರಿತು ಸ್ಪಷ್ಟನೆ ನೀಡಿರುವ ಧರ್ಮೇಂದ್ರ ಪ್ರಧಾನ್, “ಮೇ 3, 2026ರಂದು ನಡೆದ ನೀಟ್-ಯುಜಿ ಪರೀಕ್ಷೆಯಲ್ಲಿ ಅಕ್ರಮಗಳ ದೂರು ಬಂದ ತಕ್ಷಣವೇ ಸರ್ಕಾರ ಕ್ಷಿಪ್ರ ಕ್ರಮ ಕೈಗೊಂಡಿತ್ತು. ಪ್ರಕರಣದ ತನಿಖೆಯನ್ನು ತಕ್ಷಣವೇ ಸಿಬಿಐಗೆ ಹಸ್ತಾಂತರಿಸಲಾಯಿತಲ್ಲದೆ, ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆ ನಡೆಸಲು ತೀರ್ಮಾನಿಸಲಾಯಿತು. ಭವಿಷ್ಯದಲ್ಲಿ ಇಂತಹ ಅಕ್ರಮ ತಡೆಯಲು ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ (CBT) ಮಾದರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ” ಎಂದು ತಿಳಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…