ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಖಾಸಗಿ ತಡೆ ರಹಿತ ಬಸ್ ಮುಲ್ಕಿ ಬಸ್ ನಿಲ್ದಾಣ ತಲುಪುತ್ತಿದ್ದಂತೆ ಚಾಲಕನ ನಿರ್ಲಕ್ಷದ ಚಾಲನೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇನ್ನು ಅಪಘಾತದಿಂದ ಇಬ್ಬರು ಚಾಲಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೂಡಲೇ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಎರಡು ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ಕಾರು ಚಾಲಕ ದೀರಜ್ ಶೆಟ್ಟಿ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…