ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಾತನಾಡಿದ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್, ಎಲ್ಲರೂ ಸಂಯಮ ವಹಿಸಿ ರಾಜತಾಂತ್ರಿಕ ಮಾತುಕತೆಗೆ ಮರಳಬೇಕು ಎಂದು ಕರೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯ ದಾಳಿಯಲ್ಲಿ ಒಬ್ಬ ಭಾರತೀಯ ನಾವಿಕ ಮೃತಪಟ್ಟಿದ್ದು, ಮತ್ತೊಬ್ಬರು ನಾಪತ್ತೆಯಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಸುರಕ್ಷಿತ ಹಡಗು ಸಂಚಾರವನ್ನು ತಕ್ಷಣ ಪುನಃಸ್ಥಾಪಿಸಬೇಕು ಎಂದು ಭಾರತ ಒತ್ತಾಯಿಸಿದೆ.
ಇನ್ನು ಗಲ್ಫ್ ರಾಷ್ಟ್ರಗಳಲ್ಲಿ ಸುಮಾರು 1 ಕೋಟಿ ಭಾರತೀಯರು ವಾಸಿಸುತ್ತಿದ್ದು, ಅವರ ಸುರಕ್ಷತೆ ಭಾರತದ ಮೊದಲ ಆದ್ಯತೆಯಾಗಿದೆ ಎಂದು ಭಾರತ ಸ್ಪಷ್ಟಪಡಿಸಿದೆ. ಜೊತೆಗೆ ಗಾಜಾದ ಮಾನವೀಯ ಬಿಕ್ಕಟ್ಟಿನ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತ, ಇಸ್ರೇಲ್ ಜೊತೆಗೆ ಸುರಕ್ಷಿತ ಗಡಿಗಳನ್ನು ಹೊಂದಿರುವ ಸ್ವತಂತ್ರ ಪ್ಯಾಲೆಸ್ತೀನ್ ರಾಷ್ಟ್ರವೇ ಶಾಶ್ವತ ಪರಿಹಾರ ಎಂದು ವಿಶ್ವಸಂಸ್ಥೆಯಲ್ಲಿ ತನ್ನ ನಿಲುವನ್ನು ಪುನರುಚ್ಚರಿಸಿದೆ.
ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್,…
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್‌ಗಳ ಭರ್ಜರಿ ಜಯ ಸಾಧಿಸಿದೆ. 211 ರನ್‌ಗಳ ಗುರಿ…
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…