ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್, ಇನ್ನಿತರ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ.

ಮಂಗಳೂರು ಸೆಂಟ್ರಲ್ ಮತ್ತು ದಕ್ಷಿಣ ಉಪ ವಿಭಾಗದ ಎಸಿಪಿಗಳ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಕೋಟೆಕಾರು ಮತ್ತು ಕೋಣಾಜೆ ಬಂಟರ ಸಂಘದಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಕೋಣಾಜೆ, ಉಳ್ಳಾಲ, ಕಂಕನಾಡಿ, ಪಾಂಡೇಶ್ವರ, ಬಂದರು ಠಾಣೆ ವ್ಯಾಪ್ತಿಯ ಕಾಲೇಜುಗಳ ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಲಾಗಿದೆ. ಉಳ್ಳಾಲದ ಕೋಟೆಕಾರಿನಲ್ಲಿ ಮಂಗಳೂರು ಎಸ್ ಡಿ ಎಂ ಕಾಲೇಜು, ನಿಟ್ಟೆ ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜು, ಸೈಂಟ್ ಅಲೋಶಿಯಸ್, ಪಿಎ ಕಾಲೇಜು, ಬ್ಯಾರೀಸ್ ಇನ್ ಸ್ಟಿಟ್ಯೂಟ್, ಟಿಪ್ಪು ಸುಲ್ತಾನ್ ಕಾಲೇಜು ಮತ್ತು ಕೆನರಾ ಕಾಲೇಜಿಗೆ ಸೇರಿದ 72 ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಲಾಗಿದ್ದು, ಈ ಪೈಕಿ ಒಬ್ಬ ವಿದ್ಯಾರ್ಥಿ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.

ಕೋಣಾಜೆಯಲ್ಲಿ ಪಿಎ ಇಂಜಿನಿಯರಿಂಗ್ ಕಾಲೇಜಿಗೆ ಸೇರಿದ ಎರಡು ಬಸ್ ಗಳನ್ನು ನಿಲ್ಲಿಸಿ 87 ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಿದ್ದು ಎಲ್ಲರೂ ನೆಗೆಟಿವ್ ಆಗಿದ್ದಾರೆ. ಡ್ರಗ್ ಟೆಸ್ಟಿಂಗ್ ಕಿಟ್‌ಗಳನ್ನು ಸ್ಥಳಕ್ಕೆ ಕೊಂಡೊಯ್ದು ಸಂಜೆ 4.30ರಿಂದ 6 ಗಂಟೆ ನಡುವೆ ತಪಾಸಣಾ ಕಾರ್ಯ ಮಾಡಲಾಗಿದೆ. ನಿರಂತರ ತಪಾಸಣೆ ಮತ್ತು ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವುದರಿಂದ ಪಾಸಿಟಿವ್ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ಡ್ರಗ್ಸ್ ವ್ಯಸನಕ್ಕೆ ತುತ್ತಾಗುವ ಸಂಖ್ಯೆಯೂ ಇಳಿಕೆಯಲ್ಲಿದೆ. ಆದರೂ ಡ್ರಗ್ಸ್ ಫ್ರೀ ಆಗುವಲ್ಲಿ ಬಹಳಷ್ಟು ಪ್ರಯತ್ನ ಆಗಬೇಕಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಪಾಸಿಟಿವ್ ಆಗಿರುವ ಒಬ್ಬ ವಿದ್ಯಾರ್ಥಿಯನ್ನು ಕಾನೂನು ರೀತಿಯ ಕ್ರಮ ಕೈಗೊಂಡ ಬಳಿಕ ಕೌನ್ಸೆಲಿಂಗ್ ಗೆ ಒಳಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!