ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್, ಇನ್ನಿತರ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ.
ಮಂಗಳೂರು ಸೆಂಟ್ರಲ್ ಮತ್ತು ದಕ್ಷಿಣ ಉಪ ವಿಭಾಗದ ಎಸಿಪಿಗಳ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಕೋಟೆಕಾರು ಮತ್ತು ಕೋಣಾಜೆ ಬಂಟರ ಸಂಘದಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಕೋಣಾಜೆ, ಉಳ್ಳಾಲ, ಕಂಕನಾಡಿ, ಪಾಂಡೇಶ್ವರ, ಬಂದರು ಠಾಣೆ ವ್ಯಾಪ್ತಿಯ ಕಾಲೇಜುಗಳ ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಲಾಗಿದೆ. ಉಳ್ಳಾಲದ ಕೋಟೆಕಾರಿನಲ್ಲಿ ಮಂಗಳೂರು ಎಸ್ ಡಿ ಎಂ ಕಾಲೇಜು, ನಿಟ್ಟೆ ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜು, ಸೈಂಟ್ ಅಲೋಶಿಯಸ್, ಪಿಎ ಕಾಲೇಜು, ಬ್ಯಾರೀಸ್ ಇನ್ ಸ್ಟಿಟ್ಯೂಟ್, ಟಿಪ್ಪು ಸುಲ್ತಾನ್ ಕಾಲೇಜು ಮತ್ತು ಕೆನರಾ ಕಾಲೇಜಿಗೆ ಸೇರಿದ 72 ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಲಾಗಿದ್ದು, ಈ ಪೈಕಿ ಒಬ್ಬ ವಿದ್ಯಾರ್ಥಿ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.
ಕೋಣಾಜೆಯಲ್ಲಿ ಪಿಎ ಇಂಜಿನಿಯರಿಂಗ್ ಕಾಲೇಜಿಗೆ ಸೇರಿದ ಎರಡು ಬಸ್ ಗಳನ್ನು ನಿಲ್ಲಿಸಿ 87 ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಿದ್ದು ಎಲ್ಲರೂ ನೆಗೆಟಿವ್ ಆಗಿದ್ದಾರೆ. ಡ್ರಗ್ ಟೆಸ್ಟಿಂಗ್ ಕಿಟ್‌ಗಳನ್ನು ಸ್ಥಳಕ್ಕೆ ಕೊಂಡೊಯ್ದು ಸಂಜೆ 4.30ರಿಂದ 6 ಗಂಟೆ ನಡುವೆ ತಪಾಸಣಾ ಕಾರ್ಯ ಮಾಡಲಾಗಿದೆ. ನಿರಂತರ ತಪಾಸಣೆ ಮತ್ತು ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವುದರಿಂದ ಪಾಸಿಟಿವ್ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ಡ್ರಗ್ಸ್ ವ್ಯಸನಕ್ಕೆ ತುತ್ತಾಗುವ ಸಂಖ್ಯೆಯೂ ಇಳಿಕೆಯಲ್ಲಿದೆ. ಆದರೂ ಡ್ರಗ್ಸ್ ಫ್ರೀ ಆಗುವಲ್ಲಿ ಬಹಳಷ್ಟು ಪ್ರಯತ್ನ ಆಗಬೇಕಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಪಾಸಿಟಿವ್ ಆಗಿರುವ ಒಬ್ಬ ವಿದ್ಯಾರ್ಥಿಯನ್ನು ಕಾನೂನು ರೀತಿಯ ಕ್ರಮ ಕೈಗೊಂಡ ಬಳಿಕ ಕೌನ್ಸೆಲಿಂಗ್ ಗೆ ಒಳಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…