ಜನ ಮನದ ನಾಡಿ ಮಿಡಿತ

Advertisement

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ ಹಾಗೂ ನಾಯಕತ್ವದ ಸಾಧನೆಗಳನ್ನು ಅಮೆರಿಕದ ಕಾಂಗ್ರೆಸ್‌ನ ಪ್ರತಿಷ್ಠಿತ *”Congressional Record”*ನಲ್ಲಿ ದಾಖಲಿಸಿ ಗೌರವಿಸಲಾಗಿದೆ.

ಅಮೆರಿಕದ ಹೌಸ್ ಫಾರಿನ್ ಅಫೇರ್ಸ್ ಸಮಿತಿಯ ಸದಸ್ಯ ಹಾಗೂ ಕಾಂಗ್ರೆಸ್ ಸದಸ್ಯರಾದ ಜೊನಾಥನ್ ಜಾಕ್ಸನ್ ಅವರು ಈ ಗೌರವವನ್ನು ಡಾ. ಖಾದರ್ ಅವರಿಗೆ ಅಧಿಕೃತವಾಗಿ ಪ್ರದಾನಿಸಿದರು. ಅಮೆರಿಕದ ನಾಗರಿಕ ಹಕ್ಕುಗಳ ಹೋರಾಟಗಾರ ರೆವರೆಂಡ್ ಜೆಸ್ಸಿ ಜಾಕ್ಸನ್ ಅವರ ಪುತ್ರರಾಗಿರುವ ಜೊನಾಥನ್ ಜಾಕ್ಸನ್ ಅವರನ್ನು ಅಮೆರಿಕದ ರಾಜಕೀಯದಲ್ಲಿ “ಭವಿಷ್ಯದ ಬರಾಕ್ ಒಬಾಮಾ” ಎಂದೂ ಹಲವರು ಗುರುತಿಸುತ್ತಾರೆ.

ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ ಮತ್ತು ನಾಯಕತ್ವವನ್ನು ದಾಖಲಿಸಿರುವ ಈ Congressional Record ಅಮೆರಿಕದ ಕಾಂಗ್ರೆಸ್ ಆರ್ಕೈವ್ಸ್‌ನಲ್ಲಿ ಅಧಿಕೃತವಾಗಿ ಸೇರ್ಪಡೆಗೊಂಡಿದ್ದು, ಅಮೆರಿಕದ ಕಾಂಗ್ರೆಸ್ ಗ್ರಂಥಾಲಯದಲ್ಲಿ ಶಾಶ್ವತವಾಗಿ ಸಂರಕ್ಷಿಸಲಾಗುತ್ತದೆ.

ಇದರೊಂದಿಗೆ, ಅಮೆರಿಕದ ಕ್ಯಾಪಿಟಲ್ ಹಿಲ್‌ನ ಸೆಂಟ್ರಲ್ ರೋಟುಂಡಾದಲ್ಲಿ ಪ್ರದಾನಗೊಳ್ಳುವ ಪ್ರತಿಷ್ಠಿತ Congressional Challenge Medallion ಪ್ರಶಸ್ತಿಯನ್ನು ಜುಲೈ 28ರಂದು ವಾಷಿಂಗ್ಟನ್ ಡಿ.ಸಿ.ಯಲ್ಲಿ ಡಾ. ಯು. ಟಿ. ಖಾದರ್ ಫರೀದ್ ಅವರಿಗೆ ಗೌರವಪೂರ್ವಕವಾಗಿ ಪ್ರದಾನಿಸಲಾಯಿತು.

ಈ ಐತಿಹಾಸಿಕ ಗೌರವ ಪ್ರದಾನ ಸಮಾರಂಭಕ್ಕೆ ಅಮೆರಿಕದ ಕಾಂಗ್ರೆಸ್ ಸದಸ್ಯ ಜೊನಾಥನ್ ಜಾಕ್ಸನ್ ಅವರ ಹಿರಿಯ ಸಲಹೆಗಾರ ಡಾ. ವಿಜಯ್ ಜಿ. ಪ್ರಭಾಕರ್ ಹಾಗು ನವೀನ್‌ಚಂದ್ರ ಕರ್ಣ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!