ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ ಬಳಕೆಯ ಹಲವಾರು ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಕೊಳಕೆ ನಿವಾಸಿ ಚಂದ್ರಹಾಸ ಬಿನ್ ನೋಣಯ್ಯ ಪೂಜಾರಿ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಏಕಾಏಕಿ ವಿದ್ಯುತ್ ಸಂಪರ್ಕದಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ.

ಇದರ ಪರಿಣಾಮವಾಗಿ ಮನೆಯೊಳಗೆ ಹೊಗೆ ಆವರಿಸಿ, ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಮನೆಯೊಳಗಿನ ಪೀಠೋಪಕರಣಗಳು ಹಾಗೂ ದಿನನಿತ್ಯ ಬಳಕೆಯ ವಸ್ತುಗಳಿಗೆ ವ್ಯಾಪಿಸಿದೆ. ಘಟನೆಯಲ್ಲಿ ಹಾಸಿಗೆ, ಅಲಮಾರಿಯಲ್ಲಿದ್ದ ವಸ್ತುಗಳು, ಬಟ್ಟೆಗಳು, ಗೃಹೋಪಯೋಗಿ ಸಾಮಗ್ರಿಗಳು ಸೇರಿದಂತೆ ಹಲವು ವಸ್ತುಗಳು ಹಾನಿಗೊಳಗಾಗಿದ್ದು, ಕುಟುಂಬಕ್ಕೆ ಗಣನೀಯ ಪ್ರಮಾಣದ ಆರ್ಥಿಕ ನಷ್ಟ ಉಂಟಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!