ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ ಬಳಕೆಯ ಹಲವಾರು ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕೊಳಕೆ ನಿವಾಸಿ ಚಂದ್ರಹಾಸ ಬಿನ್ ನೋಣಯ್ಯ ಪೂಜಾರಿ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಏಕಾಏಕಿ ವಿದ್ಯುತ್ ಸಂಪರ್ಕದಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ.
ಇದರ ಪರಿಣಾಮವಾಗಿ ಮನೆಯೊಳಗೆ ಹೊಗೆ ಆವರಿಸಿ, ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಮನೆಯೊಳಗಿನ ಪೀಠೋಪಕರಣಗಳು ಹಾಗೂ ದಿನನಿತ್ಯ ಬಳಕೆಯ ವಸ್ತುಗಳಿಗೆ ವ್ಯಾಪಿಸಿದೆ. ಘಟನೆಯಲ್ಲಿ ಹಾಸಿಗೆ, ಅಲಮಾರಿಯಲ್ಲಿದ್ದ ವಸ್ತುಗಳು, ಬಟ್ಟೆಗಳು, ಗೃಹೋಪಯೋಗಿ ಸಾಮಗ್ರಿಗಳು ಸೇರಿದಂತೆ ಹಲವು ವಸ್ತುಗಳು ಹಾನಿಗೊಳಗಾಗಿದ್ದು, ಕುಟುಂಬಕ್ಕೆ ಗಣನೀಯ ಪ್ರಮಾಣದ ಆರ್ಥಿಕ ನಷ್ಟ ಉಂಟಾಗಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…