ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ ಕುಸಿದು ಬಿದ್ದ ಘಟನೆ ನಡೆದಿದೆ.

ಕಾಗುಡ್ಡೆ ನಿವಾಸಿ ಜಯ ಸಪಲ್ಯ ಅವರ ಮನೆಗೆ ಈ ಅನಾಹುತ ಸಂಭವಿಸಿದೆ. ಬಿರುಗಾಳಿಯ ತೀವ್ರತೆಗೆ ಮನೆಯ ಮೇಲ್ಛಾವಣಿಯ ಒಂದು ಭಾಗ ಏಕಾಏಕಿ ಕುಸಿದು ಬಿದ್ದಿದ್ದು, ಮನೆಯೊಳಗೆ ಮಳೆ ನೀರು ನುಗ್ಗಿ ಗೃಹೋಪಯೋಗಿ ವಸ್ತುಗಳಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಮನೆಯ ಸದಸ್ಯರು ಒಳಗೇ ಇದ್ದರೂ, ಚಾವಣಿ ಕುಸಿಯುವ ಶಬ್ದ ಕೇಳಿ ತಕ್ಷಣ ಸುರಕ್ಷಿತ ಸ್ಥಳಕ್ಕೆ ತೆರಳಿದ್ದರಿಂದ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ.

ಇದರಿಂದ ದೊಡ್ಡ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಮನೆಮಂದಿಗೆ ನೆರವು ನೀಡಿದರು. ಮನೆಗೆ ಸಂಭವಿಸಿದ ಹಾನಿಯನ್ನು ಪರಿಶೀಲಿಸಿದ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಸಂಬಂಧಪಟ್ಟ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪಂಚನಾಮೆ ನಡೆಸಿ, ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಂಟ್ವಾಳ ತಾಲೂಕಿನಲ್ಲಿ ಸುರಿಯುತ್ತಿರುವ ನಿರಂತರ ಮಳೆ ಮತ್ತು ಬಿರುಗಾಳಿಯಿಂದ ಹಲವು ಗ್ರಾಮಗಳಲ್ಲಿ ಮನೆಗಳು ಹಾಗೂ ಕೃಷಿ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಹಳೆಯ ಹಾಗೂ ಶಿಥಿಲಾವಸ್ಥೆಯಲ್ಲಿರುವ ಮನೆಗಳಲ್ಲಿ ವಾಸಿಸುವವರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!