ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆಗೀಡಾದವರು. ಕುಂದಾಪುರದ ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಮುಂಜಾನೆ ಸುಮಾರು 3.30ರ ವೇಳೆಗೆ ಈ ಘಟನೆ ನಡೆದಿದೆ. ಐವನ್ ರಿಚರ್ಡ್ ಅವರು ಮಹಿಳೆಯೊಬ್ಬರೊಂದಿಗೆ ಕಾರಿನಲ್ಲಿ ಸ್ಥಳಕ್ಕೆ ಬಂದಿದ್ದ ವೇಳೆ, ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್‌ನಿಂದ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಐವನ್ ರಿಚರ್ಡ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದು, ಮೃತರೊಂದಿಗೆ ಇದ್ದ ಮಹಿಳೆ ಆರೋಪಿಯನ್ನು ಗುರುತಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಐವನ್ ರಿಚರ್ಡ್ ಅವರು ವಿವಿಧ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದು, ತಮ್ಮ ಮೊದಲ ಪತ್ನಿಯಿಂದ ದೂರವಾಗಿ ಬಾರ್ಕೂರು ಮೂಲದ ಮಹಿಳೆಯೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ಆದರೆ, ಈ ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಂದಾಪುರ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು, ಸೊಕೋ ತಂಡ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪರಾರಿಯಾಗಿರುವ ಆರೋಪಿಯ ಪತ್ತೆಗೆ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಸಂಬಂಧ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆಯ ಹಿಂದಿನ ಉದ್ದೇಶ ಹಾಗೂ ಆರೋಪಿಯ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…