ಜನ ಮನದ ನಾಡಿ ಮಿಡಿತ

Advertisement

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ ಮಾರಣಹೋಮ ನಡೆದಿರುವ ಘಟನೆ ವರದಿಯಾಗಿದೆ.

ಸಂಕಷ್ಟಕ್ಕೊಳಗಾಗಿರುವ ಸಂತ್ರಸ್ತ ರೈತ ಶಿವಣ್ಣ ಅವರು ನಷ್ಟಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ಗ್ರಾಮ ಪಂಚಾಯಿತಿಗೆ ಒತ್ತಾಯಿಸಿದ್ದಾರೆ. ಬೀರತಮ್ಮನಹಳ್ಳಿಯ ಶಿವಣ್ಣ ಅವರು ತಮ್ಮ ಪುತ್ರನ ಹೆಸರಿನಲ್ಲಿ ಗ್ರಾಮ ಪಂಚಾಯಿತಿಯಿಂದ ಕೆರೆಯಲ್ಲಿ ಮೀನು ಹಿಡಿಯುವ ಗುತ್ತಿಗೆ ಪಡೆದಿದ್ದರು. ಸುಮಾರು 2 ಲಕ್ಷ ರೂ. ವೆಚ್ಚದಲ್ಲಿ ಕೆರೆಗೆ ಮೀನು ಮರಿಗಳನ್ನು ಬಿಟ್ಟು ಸಾಕಣೆ ಮಾಡಿದ್ದರು. ಇತ್ತೀಚೆಗೆ ಕೆರೆಯಲ್ಲಿ ನೀರು ಕಡಿಮೆಯಾದಾಗ ಮೀನು ಹಿಡಿಯಲು ಹೋದಾಗ ಈ ಅನಾಹುತ ಬೆಳಕಿಗೆ ಬಂದಿದೆ. 3 ದಿನಗಳ ಹಿಂದೆ ಕಿಡಿಗೇಡಿಗಳು ಕೆರೆಗೆ ಕಳೆನಾಶಕ ಅಥವಾ ಕ್ರಿಮಿನಾಶಕ ಬೆರೆಸಿದ್ದರಿಂದ ಮೀನುಗಳು ಸಾಮೂಹಿಕವಾಗಿ ಮೃತಪಟ್ಟಿವೆ. ಮೀನು ಸಾಕಣೆಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದೆ, ಗ್ರಾಮ ಪಂಚಾಯಿತಿ ಅಧಿಕಾರಿಗಳು ತಮಗೆ ಸೂಕ್ತ ಪರಿಹಾರ ಕೊಡಿಸಬೇಕೆಂದು ಮನವಿ ಮಾಡಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಇನ್‌ಸ್ಪೆಕ್ಟರ್ ಸಂತೋಷ್ ಕಶ್ಯಪ್, ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳು ಸಾವನ್ನಪ್ಪುತ್ತಿರುವ ಬಗ್ಗೆ ದೂರು ಬಂದಿದೆ. ಇದು ಕಿಡಿಗೇಡಿಗಳ ಕೃತ್ಯವೋ ಅಥವಾ ಕೆರೆಯ ಸುತ್ತಮುತ್ತಲ ಜಮೀನುಗಳಲ್ಲಿ ಬೆಳೆಗಳಿಗೆ ಸಿಂಪಡಿಸಿದ್ದ ಕ್ರಿಮಿನಾಶಕವು ಕೆರೆ ನೀರಿಗೆ ಸೇರಿ ಮೀನುಗಳು ಅಸ್ವಸ್ಥಗೊಂಡು ಮೃತಪಟ್ಟಿವೆಯೋ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!