ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ ಮಾರಣಹೋಮ ನಡೆದಿರುವ ಘಟನೆ ವರದಿಯಾಗಿದೆ.
ಸಂಕಷ್ಟಕ್ಕೊಳಗಾಗಿರುವ ಸಂತ್ರಸ್ತ ರೈತ ಶಿವಣ್ಣ ಅವರು ನಷ್ಟಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ಗ್ರಾಮ ಪಂಚಾಯಿತಿಗೆ ಒತ್ತಾಯಿಸಿದ್ದಾರೆ. ಬೀರತಮ್ಮನಹಳ್ಳಿಯ ಶಿವಣ್ಣ ಅವರು ತಮ್ಮ ಪುತ್ರನ ಹೆಸರಿನಲ್ಲಿ ಗ್ರಾಮ ಪಂಚಾಯಿತಿಯಿಂದ ಕೆರೆಯಲ್ಲಿ ಮೀನು ಹಿಡಿಯುವ ಗುತ್ತಿಗೆ ಪಡೆದಿದ್ದರು. ಸುಮಾರು 2 ಲಕ್ಷ ರೂ. ವೆಚ್ಚದಲ್ಲಿ ಕೆರೆಗೆ ಮೀನು ಮರಿಗಳನ್ನು ಬಿಟ್ಟು ಸಾಕಣೆ ಮಾಡಿದ್ದರು. ಇತ್ತೀಚೆಗೆ ಕೆರೆಯಲ್ಲಿ ನೀರು ಕಡಿಮೆಯಾದಾಗ ಮೀನು ಹಿಡಿಯಲು ಹೋದಾಗ ಈ ಅನಾಹುತ ಬೆಳಕಿಗೆ ಬಂದಿದೆ. 3 ದಿನಗಳ ಹಿಂದೆ ಕಿಡಿಗೇಡಿಗಳು ಕೆರೆಗೆ ಕಳೆನಾಶಕ ಅಥವಾ ಕ್ರಿಮಿನಾಶಕ ಬೆರೆಸಿದ್ದರಿಂದ ಮೀನುಗಳು ಸಾಮೂಹಿಕವಾಗಿ ಮೃತಪಟ್ಟಿವೆ. ಮೀನು ಸಾಕಣೆಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದೆ, ಗ್ರಾಮ ಪಂಚಾಯಿತಿ ಅಧಿಕಾರಿಗಳು ತಮಗೆ ಸೂಕ್ತ ಪರಿಹಾರ ಕೊಡಿಸಬೇಕೆಂದು ಮನವಿ ಮಾಡಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಇನ್‌ಸ್ಪೆಕ್ಟರ್ ಸಂತೋಷ್ ಕಶ್ಯಪ್, ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳು ಸಾವನ್ನಪ್ಪುತ್ತಿರುವ ಬಗ್ಗೆ ದೂರು ಬಂದಿದೆ. ಇದು ಕಿಡಿಗೇಡಿಗಳ ಕೃತ್ಯವೋ ಅಥವಾ ಕೆರೆಯ ಸುತ್ತಮುತ್ತಲ ಜಮೀನುಗಳಲ್ಲಿ ಬೆಳೆಗಳಿಗೆ ಸಿಂಪಡಿಸಿದ್ದ ಕ್ರಿಮಿನಾಶಕವು ಕೆರೆ ನೀರಿಗೆ ಸೇರಿ ಮೀನುಗಳು ಅಸ್ವಸ್ಥಗೊಂಡು ಮೃತಪಟ್ಟಿವೆಯೋ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…