ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ ಮಾರಾಟ ಜಾಲದ ರೂವಾರಿ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.

ಡಿವೈಎಸ್‌ಪಿ ಚಂದ್ರಶೇಖರ್ ಆರಂಭಿಸಿದ್ದ ರಹಸ್ಯ ಕ್ಯೂಆರ್ ಕೋಡ್ ಮೂಲಕ ಬಂದ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿ, ಗ್ಯಾಂಗ್ ಮುಖ್ಯಸ್ಥ ದಿಶಾಂತ್ ಸೇರಿದಂತೆ ಒಟ್ಟು 9 ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರಿಂದ ಹೈಡ್ರೋ ಗಾಂಜಾ, ಸಾಮಾನ್ಯ ಗಾಂಜಾ ಹಾಗೂ ಫಾರ್ಚ್ಯೂನರ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.



