ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ.
ಮೂಲಗಳ ಪ್ರಕಾರ, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಅವರು ಪಕ್ಷದ ಹೈಕಮಾಂಡ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಈ ಬಗ್ಗೆ ಬಿಜೆಪಿ ಅಥವಾ ಶೆಹಜಾದ್ ಪೂನಾವಾಲಾ ಅವರಿಂದ ಇನ್ನೂ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ.
ಇದೀಗ ತಮ್ಮ ‘ಎಕ್ಸ್’ ಖಾತೆಯ ಬಯೋದಿಂದ ‘ಬಿಜೆಪಿ ರಾಷ್ಟ್ರೀಯ ವಕ್ತಾರ’ ಎಂಬ ಉಲ್ಲೇಖವನ್ನು ತೆಗೆದುಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ. ಶೀಘ್ರದಲ್ಲೇ ಅವರು ಈ ಕುರಿತು ಅಧಿಕೃತ ಹೇಳಿಕೆ ನೀಡುವ ಸಾಧ್ಯತೆ ಇದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…