ಜನ ಮನದ ನಾಡಿ ಮಿಡಿತ

Advertisement

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ ಅವರನ್ನು ಬಿಜೆಪಿ ಜಿಲ್ಲಾ ಘಟಕ ಅಭಿನಂದಿಸಿತು.

ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ, ರಾಜ್ಯ ಸಮಿತಿ ಸದಸ್ಯ ಸತೀಶ್ ಚಂದ್ರ ಭಂಡಾರಿ, ಜಿಲ್ಲಾ ಉಪಾಧ್ಯಕ್ಷ ಮಣಿಕಂಠ ರೈ, ರಾಜ್ಯ ಕೌನ್ಸಿಲ್ ಸದಸ್ಯ ಪದ್ಮನಾಭ ಕಡಪ್ಪುರಂ, ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ., ಪ್ರಧಾನ ಕಾರ್ಯದರ್ಶಿ ಯತಿರಾಜ್, ವರ್ಕಾಡಿ ಪಂಚಾಯತ್ ಸಮಿತಿ ಅಧ್ಯಕ್ಷ ಭಾಸ್ಕರ್ ಪೊಯ್ಯೆ, ಪ್ರಧಾನ ಕಾರ್ಯದರ್ಶಿ ನಾಗೇಶ್ ಬಳ್ಳೂರು ಮುಂತಾದವರು ಸೇರಿ ರೂಪಶ್ರೀ ಅವರನ್ನು ಅಭಿನಂದಿಸಿದರು. ಈ ಗೌರವವು ರೂಪಶ್ರೀ ಅವರ ವರ್ಷಗಳ ಶ್ರಮ ಮತ್ತು ಅಭಿನಯ ಪ್ರತಿಭೆಗೆ ಸಿಕ್ಕ ಸೂಕ್ತ ಗೌರವವಾಗಿದೆ ಎಂದು ಎಂ.ಎಲ್. ಅಶ್ವಿನಿ ಹೇಳಿದರು. ನೂರಾರು ನಾಟಕಗಳ ಮೂಲಕ ತಮ್ಮ ಪ್ರತಿಭೆಯನ್ನು ನಿರೂಪಿಸಿದ ರೂಪಶ್ರೀ ಅವರ ರಾಷ್ಟ್ರೀಯ ಪ್ರಶಸ್ತಿ ಸಾಧನೆ ಕಾಸರಗೋಡು ಜಿಲ್ಲೆಗೆ ಹೆಮ್ಮೆಯಾಗಿದೆ ಎಂದು ಅಶ್ವಿನಿ ಪ್ರತಿಕ್ರಿಯಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!