ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ ಮಹರ್ಷಿ ನಾರದರ ಸಂಸ್ಮರಣೆಯಲ್ಲಿ ನೀಡಲಾಗುವ ‘ನಾರದ ಪುರಸ್ಕಾರ’ ಪ್ರಶಸ್ತಿಗೆ ‘ಹೊಸ ದಿಗಂತ ಪತ್ರಿಕೆ’ಯ ಮಂಗಳೂರು ಆವೃತ್ತಿಯ ಪ್ರಧಾನ ವರದಿಗಾರ ಸುರೇಶ್ ಡಿ. ಪಳ್ಳಿ ಅವರು ಭಾಜನರಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ ಆ.4 ರಂದು ಸಂಜೆ 4 ಗಂಟೆಗೆ ಕಾರಣಗಿರಿಯಲ್ಲಿರುವ ಶ್ರೀ ಸಿದ್ಧಿವಿನಾಯಕ ಸಭಾ ಭವನದಲ್ಲಿ ನಡೆಯಲಿದೆ. ಕಲಾದರ್ಶನ ಮಾಸಪತ್ರಿಕೆಯ ಪ್ರಧಾನ ಸಂಪಾದಕ ಹಾದಿಗಲ್ಲು ಲಕ್ಷ್ಮೀನಾರಾಯಣ ಅವರು ಅಧ್ಯಕ್ಷತೆ ವಹಿಸಲಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಮಗ್ರ ಕರ್ನಾಟಕ ಪ್ರಾಂತದ ಪ್ರಚಾರ ಪ್ರಮುಖ್ ಅರುಣ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಗ್ರಾಮ ಭಾರತಿ ಟ್ರಸ್ಟ್ ಅಧ್ಯಕ್ಷ ಹನಿಯ ರವಿ ಮತ್ತಿತರರು ಉಪಸ್ಥಿತರಿರುವರು. ಒಟ್ಟು ಒಂಭತ್ತು ಮಂದಿ ಪತ್ರಕರ್ತರಿಗೆ ನಾರದ ಪುರಸ್ಕಾರ ಪ್ರದಾನವಾಗಲಿದೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರುವ ಸುರೇಶ್ ಡಿ. ಪಳ್ಳಿ ಅವರು ಕಳೆದ 19 ವರ್ಷಗಳಿಂದ ಹೊಸ ದಿಗಂತ ಪತ್ರಿಕೆಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ 2013ರಲ್ಲಿ ಅತ್ಯುತ್ತಮ ಗ್ರಾಮೀಣ ವರದಿಗಾಗಿ ಪದ್ಯಾಣ ಗೋಪಾಲಕೃಷ್ಣ ಸಂಸ್ಮರಣಾ ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ (ಪ.ಗೋ ಪ್ರಶಸ್ತಿ), ಸಮಾಜದಲ್ಲಿ ಸೌಹಾರ್ದತೆ ಪ್ರತಿಬಿಂಬಿಸುವ ವಿಶೇಷ ವರದಿಗಾಗಿ 2023ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ‘ಬ್ರ್ಯಾಂಡ್ ಮಂಗಳೂರು’ ಪ್ರಶಸ್ತಿ ಲಭಿಸಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…