ಕರಂಬಾರು ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘ (ರಿ.), ಶಾಲಾ ಅಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆದಿದೆ.
ಆಟಿಡೊಂಜಿ ದಿನ’ ಕಾರ್ಯಕ್ರಮಕ್ಕೆ ಬಜ್ಪೆ ಪಟ್ಟಣ ಪಂಚಾಯತ್ ಅಧ್ಯಕ್ಷ ಲೋಕೇಶ್ ಪೂಜಾರಿ ಚಾಲನೆ ನೀಡಿದ್ರು. ಬಳಿಕ ಮಾತನಾಡಿದ ಅವರು ಆಟಿ ತಿಂಗಳಲ್ಲಿ ಪ್ರಕೃತಿಯಲ್ಲಿ ಹಲವು ಬದಲಾವಣೆಗಳಾಗುತ್ತವೆ. ಈ ಸಮಯದಲ್ಲಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನಮ್ಮ ಹಿರಿಯರು ನಲಿಕೆ, ತಜಂಕ್, ಪತ್ರೊಡೆ, ಗೇರುಸೊಪ್ಪು, ಮತ್ತು ವಿವಿಧ ಕಾಡಿನ ಗೆಡ್ಡೆ-ಗೆಣಸುಗಳನ್ನು ಬಳಸಿ ವಿಶೇಷ ಅಡುಗೆಗಳನ್ನು ತಯಾರಿಸುತ್ತಿದ್ದರು.
ಆಟಿ ಕೂಟದ ಮೂಲಕ ಇಂದಿನ ಯುವ ಪೀಳಿಗೆಗೆ ಈ ಆರೋಗ್ಯಕರ ಊಟದ ರುಚಿ ಮತ್ತು ಮಹತ್ವವನ್ನು ಪರಿಚಯಿಸಲಾಗುತ್ತದೆ ಎಂದು ಹೇಳಿದ್ದಾರೆ. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗುಣಪಾಲ ದೇವಾಡಿಗ, ಶ್ರೀ ಮರಿಯಮ್ಮ ಕೋಟಿ ಬಬ್ಬುಸ್ವಾಮಿ ದೈವಸ್ಥಾನದ ಅಧ್ಯಕ್ಷ ಜಗನ್ನಾಥ್ ಸಾಲ್ಯಾನ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…