ಬಿಹಾರದ ಸಹರ್ಸಾದ ಸಿಮ್ರಿ ಭಕ್ತಿಯಾರ್ಪುರ್ ರೈಲು ನಿಲ್ದಾಣದಲ್ಲಿ ನಿಂತಿದ್ದ ಪ್ರಯಾಣಿಕರ ರೈಲಿನ ಎಂಜಿನ್ ಹಾಗೂ ಬೋಗಿಯಲ್ಲಿ ಸೋಮವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ.
ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ದಳ ಮತ್ತು ರೈಲ್ವೆ ಸುರಕ್ಷತಾ ಪಡೆ ಸುಮಾರು ಎರಡೂವರೆ ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಂದಿಸಿವೆ. ಘಟನೆಯಿಂದ ಕೆಲಕಾಲ ರೈಲು ಸಂಚಾರ ವ್ಯತ್ಯಯಗೊಂಡಿದ್ದು, ಬಳಿಕ ಮಾರ್ಗ ಪುನಃ ಆರಂಭಿಸಲಾಗಿದೆ. ಬೆಂಕಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಶಂಕೆಯ ಹಿನ್ನೆಲೆಯಲ್ಲಿ ರೈಲ್ವೆ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಘಟನೆ ಕುರಿತು ಜಂಟಿ ಪರಿಶೀಲನೆಗೂ ಆದೇಶಿಸಲಾಗಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…