ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ ರಾತ್ರಿ ಮನೆ ಸಮೀಪ ತುಂಬಿ ಹರಿಯುತ್ತಿರುವ ತೋಡಿನ ಬಳಿ ಕಂಡುಬಂದಿದ್ದು ಅವರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾತ್ರಿಯಿಂದಲೇ ಶೋಧ ಕಾರ್ಯ ನಡೆಯುತ್ತಿತ್ತು.

ಇದೀಗ ಅರಳ ಗ್ರಾಮದ ಪಂಬದಗದ್ದೆ ಎಂಬಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಶನಿವಾರ ರಾತ್ರಿ ಸಂಭವಿಸಿದ ಘಟನೆಯ ಬಳಿಕ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್ ತಂಡಗಳು ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಿದ್ದವು. ಮಳೆ ಹಾಗೂ ನೀರಿನ ಹರಿವು ಹೆಚ್ಚಿದ್ದ ಕಾರಣ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದ್ದರೂ ಶೋಧ ಮುಂದುವರಿಸಲಾಗಿತ್ತು. ಸೋಮವಾರ ಬೆಳಿಗ್ಗೆ ಅರಳ ಗ್ರಾಮದ ಪಂಬದಗದ್ದೆ ಸಮೀಪದ ನೀರಿನಲ್ಲಿ ಜೀವನ್ ಪಿಂಟೋ ಅವರ ಮೃತದೇಹ ಪತ್ತೆಯಾಗಿದೆ ಎಂದು ಎನ್‌ಡಿಆರ್‌ಎಫ್ ತಂಡ ಮಾಹಿತಿ ನೀಡಿದೆ.

ಮೃತದೇಹವನ್ನು ಮೇಲಕ್ಕೆತ್ತಿ ಮುಂದಿನ ಕಾನೂನು ಪ್ರಕ್ರಿಯೆಗಾಗಿ ಸಂಬಂಧಿತ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲದಲ್ಲಿ ನದಿ, ಹೊಳೆ ಹಾಗೂ ತೋಡುಗಳ ನೀರಿನ ಹರಿವು ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಇನ್ನು ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೀವನ್ ಪಿಂಟೋ ಅವರು ತಮ್ಮ ಮನೆಯಿಂದ ಸ್ವಲ್ಪವೇ ದೂರದಲ್ಲಿರುವ ಮಾವನ ಮನೆಗೆ ಆಗಸ್ಟ್ 1ರ ರಾತ್ರಿ ಸುಮಾರು 7.30ರ ವೇಳೆ ನಡೆದುಕೊಂಡು ಹೋಗುವುದಾಗಿ ಹೊರಟಿದ್ದರು. ಧಾರಾಕಾರ ಮಳೆ ಹಾಗೂ ಕತ್ತಲು ಇರುವ ಹಿನ್ನೆಲೆಯಲ್ಲಿ ಟಾರ್ಚ್ ಹಿಡಿದುಕೊಂಡು ತೋಡಿನ ಮೇಲೆ ಹಾಕಲಾಗಿರುವ ಮಿನಿಸೇತುವೆ ಯ ಮೇಲೆ ನಡೆದುಕೊಂಡು ಇನ್ನೊಂದು ಬದಿಗೆ ತಲುಪಬೇಕಿತ್ತು. ಆದರೆ ಅವರು ಎಷ್ಟು ಹೊತ್ತಾದರೂ ತಲುಪದ ಹಿನ್ನೆಲೆ ಮಾಹಿತಿ ತಿಳಿದು ಹುಡುಕಾಟ ಆರಂಭಿಸಿದಾಗ, ಅವರ ಚಪ್ಪಲಿ ಮತ್ತು ಟಾರ್ಚ್ ತೋಡಿನಲ್ಲಿ ಪತ್ತೆಯಾಗಿದೆ. ಸಮೀಪವರ್ತಿಗಳನ್ನೆಲ್ಲಾ ವಿಚಾರಿಸಿ, ಹುಡುಕಾಟ ನಡೆಸಿದಾಗ ಅವರು ಕಂಡುಬಾರದ ಹಿನ್ನೆಲೆಯಲ್ಲಿ ತೋಡಿನಲ್ಲಿ ಕಾಲುಜಾರಿ ಬಿದ್ದಿರಬಹುದೇ ಎಂಬ ಶಂಕೆಯಿಂದ ಹುಡುಕಾಟ ಆರಂಭಿಸಲಾಯಿತು. ಕೂಡಲೇ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಎನ್.ಡಿ.ಆರ್.ಎಫ್. ತಂಡಕ್ಕೂ ಕರೆ ಹೋಯಿತು. ಸ್ಥಳೀಯರೂ ಸೇರಿ ರಾತ್ರಿಯಿಂದ ಭಾನುವಾರ ಸಂಜೆಯವರೆಗೂ ಹುಡುಕಾಟ ನಡೆಸಲಾಗಿತ್ತು. ಇದೀಗ ಸೋಮವಾರ ಅವರು ಶವವಾಗಿ ಪತ್ತೆಯಾಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!