ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಮಂಗಳೂರು ನಗರದಲ್ಲಿನ 28 ಪ್ರಮುಖ ಜಂಕ್ಷನ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕ್ಯಾಮರಾಗಳು ವಾಹನ ದಟ್ಟಣೆಗೆ ಅನುಗುಣವಾಗಿ ಸಿಗ್ನಲ್‌ಗಳನ್ನು ಸ್ವಯಂಚಾಲಿತವಾಗಿ ನಿಯಂತ್ರಿಸುವ ಮೂಲಕ ಸಂಚಾರ ಸುಗಮಗೊಳಿಸುತ್ತಿವೆ. ಇದಲ್ಲದೆ ಸಂಚಾರಿ ಪೊಲೀಸ್ ಇಲಾಖೆಯು ವಿವಿಧ ಸ್ಥಳಗಳಲ್ಲಿ ಹೆಚ್ಚುವರಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದು, ಸಂಚಾರ ನಿಯಮ ಉಲ್ಲಂಘನೆ, ಅಪಘಾತ ತಡೆ ಹಾಗೂ ಅಪರಾಧ ತನಿಖೆಗೆ ಈ ವ್ಯವಸ್ಥೆ ಪರಿಣಾಮಕಾರಿಯಾಗಿ ನೆರವಾಗುತ್ತಿದೆ.
ದರೋಡೆ, ಕೊಲೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳನ್ನು ಪತ್ತೆಹಚ್ಚುವಲ್ಲೂ ಕ್ಯಾಮರಾಗಳು ಪ್ರಮುಖ ಪಾತ್ರ ವಹಿಸಿವೆ. ಮಂಗಳೂರು ನಗರದಲ್ಲಿ ಇನ್ನು ಮುಂದೆ ಮಿತಿ ಮೀರಿದ ವೇಗದಿಂದ ವಾಹನ ಚಾಲನೆಗೂ ದಂಡ ವಿಧಿಸಲಾಗುವುದು. ಎಐ ಕ್ಯಾಮರಾಗಳ ಮೂಲಕ ವೇಗ ಉಲ್ಲಂಘನೆ ಪತ್ತೆ ಮಾಡಿ ಪ್ರಕರಣ ದಾಖಲಿಸಲಾಗುತ್ತಿದ್ದು, ‘ಇ-ವಾಹನ’ ವ್ಯವಸ್ಥೆ ಜಾರಿಯಾದ ಹಿನ್ನೆಲೆಯಲ್ಲಿ ಹೊರರಾಜ್ಯದ ವಾಹನಗಳಿಗೂ ನೋಟಿಸ್ ಜಾರಿಗೊಳಿಸಿ ದಂಡ ವಸೂಲಿ ಮಾಡಬಹುದಾಗಿದೆ. ಮಂಗಳೂರು ನಗರ ವ್ಯಾಪ್ತಿಯ ಎಲ್ಲಾ ಸಿಸಿ ಕ್ಯಾಮರಾಗಳು ಸುಸ್ಥಿತಿಯಲ್ಲಿದ್ದು, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ನಿರಂತರವಾಗಿ ದಾಖಲಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ವೇಗ ಮಿತಿ ಉಲ್ಲಂಘನೆ ವಿರುದ್ಧವೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಂಚಾರ ವಿಭಾಗದ ಡಿಸಿಪಿ ರವಿಶಂಕರ್ ತಿಳಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…
ಬಂಟ್ವಾಳ ಪರಿಸರದಾದ್ಯಂತ ಸೋಮವಾರ ಬೆಳಗ್ಗೆ ಗಾಳಿ ಮಳೆಯಾಗಿದ್ದು, ಬಿ.ಮೂಡ ಗ್ರಾಮದ ಪೆಲತ್ತಿಮಾರ್ ಅರ್ಕಮೆ ಎಂಬಲ್ಲಿ ಕುಲಾಲ್ ಭವನ ಸಹಿತ ಕೆಲವು…