ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹಾಗೂ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿದರು.
ಸ್ಥಳೀಯರಿಂದ ಸಮಸ್ಯೆಗಳು ಹಾಗೂ ತತ್‌ಕ್ಷಣದ ಪರಿಹಾರದ ಅಗತ್ಯದ ಕುರಿತು ಮಾಹಿತಿ ಪಡೆದಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಮಾತನಾಡಿ, ಕಾಪು ಕ್ಷೇತ್ರದ 8-9 ಕಡಲ್ಕೊರೆತ ಪ್ರದೇಶಗಳನ್ನು ಪರಿಶೀಲಿಸಿದ್ದು, ಅಗತ್ಯವಿರುವಲ್ಲಿ ತುರ್ತು ಕಾಮಗಾರಿ ಕೈಗೊಳ್ಳುವಂತೆ ಬಂದರು ಇಲಾಖೆಗೆ ಸೂಚನೆ ನೀಡಲಾಗಿದೆ. ಈ ಕಾಮಗಾರಿಗಾಗಿ ಕೂಡಲೇ 2 ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದ್ದು, ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು ಎಂದಿದ್ದಾರೆ. ಶಾಶ್ವತ ಪರಿಹಾರಕ್ಕಾಗಿ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಚೆನ್ನೈ ಮೂಲದ ತಜ್ಞ ಸಂಸ್ಥೆಯೊಂದಿಗೆ ಸಮಾಲೋಚನೆ ನಡೆಯುತ್ತಿದೆ.
ಶೋರ್‌ಲೈನ್ ಮ್ಯಾನೇಜ್‌ಮೆಂಟ್ ಪ್ಲಾನ್ ಆಧಾರದಲ್ಲಿ ತಜ್ಞರ ಸಲಹೆಯಂತೆ ಸೂಕ್ತ ಮಾದರಿಯ ಶಾಶ್ವತ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಕಾಪು ಕ್ಷೇತ್ರದ ವಿವಿಧ ಭಾಗಗಳಲ್ಲಿ ಕಡಲ್ಕೊರೆತ ತೀವ್ರಗೊಂಡು ಕರಾವಳಿ ನಿವಾಸಿಗಳು ಆತಂಕದಲ್ಲಿದ್ದಾರೆ. ಶಾಶ್ವತ ಪರಿಹಾರಕ್ಕಾಗಿ ಸುಮಾರು 100 ಕೋಟಿ ರೂ. ವೆಚ್ಚದ ಯೋಜನೆ ಸಿದ್ಧಗೊಂಡಿದ್ದು, ಈ ಕುರಿತು ವಿಧಾನಸಭೆಯ ಅಧಿವೇಶನದಲ್ಲಿಯೂ ಪ್ರಸ್ತಾವಿಸಲಾಗಿದೆ ಎಂದಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…