ಕಾಸರಗೋಡು: ಮಣಿ ಕೃಷ್ಣ ಸ್ವಾಮಿ ಅಕಾಡಮಿ ಯ ಶ್ರೀ ಕ್ಷೇತ್ರ ಧರ್ಮಸ್ಥಳ ಕೃತಿಗಳಾಧರಿತ 14″ನೇ ಸಂಗೀತ ಕಛೇರಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಪ್ರತಿಷ್ಠಾನದ ಸಹಯೋಗದಲ್ಲಿ ನಡೆಯಿತು. ವಿದ್ವಾನ್ ಕಲ್ಮಾಡಿ ಸದಾಶಿವ ಆಚಾರ್ಯ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಗಡಿನಾಡು ಕಾಸರಗೋಡಿನಲ್ಲಿ ಚಾರಿತ್ರಿಕ ಕಾರ್ಯಕ್ರಮ ಆಯೋಜಿಸಿ ಸಿರಿಬಾಗಿಲು ಪ್ರತಿಷ್ಠಾನದ ಯೋಜನೆ ಯೋಚನೆ ಅದ್ವಿತೀಯವಾದುದು. ಸಾಂಸ್ಕೃತಿಕ ಹಾಗು ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕಾಯಕ ಪ್ರತಿಷ್ಠಾನ ನಡೆಸುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದ ಕೃತಿ ಗಳ ನ್ನು ಆಧಾರಿಸಿ ಮಣಿಕೃಷ್ಣ ಸ್ವಾಮಿ ಅಕಾಡಮಿ ಯು ಇಂತಹ ಅಪೂರ್ವ ವಾದ ಕೊಡುಗೆ ಸಮಾಜಕ್ಕೆ ನೀಡುತ್ತಿದೆ. ಮಂಜುನಾಥ ಸ್ವಾಮಿಯು ಅನುಗ್ರಹಿಸಲಿ ಎಂದು ಹರಸಿದರು. ಶ್ರೀ ಕಲ್ಮಾಡಿ ಸದಾಶಿವ ಆಚಾರ್ಯ ರವರು ಅಪಾರ ಶಿಷ್ಯ ವೃಂದ ವನ್ನು ಹೊಂದಿದ ಸಂಗೀತ ಕ್ಷೇತ್ರದ ಕಾಸರಗೋಡಿನ ಹಿರಿಯ ವಿದ್ವಾಂಸ ರಾಗಿದ್ದಾರೆ.
ಧಾರ್ಮಿಕ ಮುಂದಾಳು ಶ್ರೀ ವೆಂಕಟ್ರಮಣ ಹೊಳ್ಳ ಕಾಸರಗೋಡು, ನಿವೃತ್ತ ಪ್ರಾಧ್ಯಾಪಕ ಪ್ರೋ. ಶ್ರೀನಾಥ್, ಶ್ರೀ ಮೋಹನದಾಸ್ ಶೆಟ್ಟಿ ಸಿರಿಬಾಗಿಲು, ಸಂಗೀತ ವಿಧುಷಿ ಶ್ರೀಮತಿ ರಾಧಾ ಮುರಳೀಧರನ್,ಶ್ರೀ ಲಕ್ಷ್ಮೀ ನಾರಾಯಣ ಕಾವುಮಠ ಉಪಸ್ಥಿತರಿದ್ದರು.
ಹಲವು ಕ್ಷೇತ್ರದಲ್ಲಿ ಸಂಗೀತ ಕಾರ್ಯಾಗಾರ ನಡೆಸಿದ್ದೇವೆ. ಯಕ್ಷಗಾನ ಕ್ಷೇತ್ರದ ಪ್ರಧಾನ ಕೇಂದ್ರವಾಗಿರುವ ಗಡಿನಾಡು ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಇದೇ ಪ್ರಥಮ. ನಮ್ಮ ಸುಯೋಗ ವೆಂದು ಮಣಿ ಕೃಷ್ಣ ಸ್ವಾಮಿ ಅಕಾಡಮಿಯ ಕಾರ್ಯದರ್ಶಿ ಶ್ರೀ ನಿತ್ಯಾನಂದ ರಾವ್ ಪೇಜಾವರ ಅಂದರು.
ಸಿರಿಬಾಗಿಲು ರಾಮಕೃಷ್ಣ ಮಯ್ಯ ಅವರು ಸ್ವಾಗತಿಸಿದರು.
ಆ ಬಳಿಕ ಶ್ರೇಯಾ ಕೊಳತ್ತಾಯ ಸುರತ್ಕಲ್, ಉಷಾ ರಾಮಕೃಷ್ಣ ಭಟ್ ಕಿನ್ನಿಗೊಳಿ, ಶರಣ್ಯಾ ಕೆ.ಯಸ್. ಸುರತ್ಕಲ್, ಸುಮೇಧಾ ಕೆ.ಯನ್.ಮೇಧಾ ಉಡುಪ ಮಂಗಳೂರು ಇವರಿಂದ ಮಂಜುನಾದ ಸಂಗೀತ ಕಛೇರಿ ನಡೆಯಿತು, ವಯಲಿನ್ ನಲ್ಲಿ ತನ್ಮಯಿ ಉಪ್ಪಂಗಳ, ಮೃದಂಗ ದಲ್ಲಿ ಕೌಶಿಕ್ ರಾಮಕೃಷ್ಣನ್ ಕಾಸರಗೋಡು ಸಹಕರಿಸಿದರು .
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…