ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

 ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆ ಸಮಸ್ಯೆಗೆ ಕೊನೆಗೂ ಅಧಿಕಾರಿಗಳು ಹಾಗೂ ಗುತ್ತಿಗೆ ಕಂಪನಿ ಸ್ಪಂದಿಸಿದೆ.

ಮಾಧ್ಯಮಗಳಲ್ಲಿ ಸಮಸ್ಯೆ ಪ್ರಮುಖವಾಗಿ ವರದಿಯಾದ ಬೆನ್ನಲ್ಲೇ ಗುತ್ತಿಗೆ ಕಂಪನಿ ಸ್ಥಳದಲ್ಲಿ ಚರಂಡಿಯಲ್ಲಿದ್ದ ಹೂಳು ತೆರವುಗೊಳಿಸುವ ಕಾರ್ಯ ಆರಂಭಿಸಿದ್ದು, ಮಳೆ ನೀರು ಸುಗಮವಾಗಿ ಹರಿದು ಹೋಗುವಂತೆ ಹೆಚ್ಚುವರಿ ಮೋರಿ ಅಳವಡಿಸುವ ಕಾಮಗಾರಿಯನ್ನೂ ಕೈಗೆತ್ತಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಳಿಕ ಮಳೆ ನೀರು ರಸ್ತೆ ಮೇಲೆ ನಿಂತು ಕೃತಕ ನೆರೆ ಉಂಟಾಗುತ್ತಿತ್ತು. ಇದರಿಂದ ದ್ವಿಚಕ್ರ ವಾಹನ ಸವಾರರು, ಪಾದಚಾರಿಗಳು, ವಿದ್ಯಾರ್ಥಿಗಳು ಹಾಗೂ ಸ್ಥಳೀಯ ನಿವಾಸಿಗಳು ಪ್ರತೀ ಮಳೆಗಾಲದಲ್ಲಿ ಸಂಕಷ್ಟ ಅನುಭವಿಸುತ್ತಿದ್ದರು.

ಈ ಕುರಿತು ಸ್ಥಳೀಯರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿರಲಿಲ್ಲ. ಆದರೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಬಳಿಕ ಕಾಮಗಾರಿ ಆರಂಭಗೊಂಡಿದ್ದು, ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ತಾತ್ಕಾಲಿಕ ಕ್ರಮಕ್ಕೆ ಸೀಮಿತವಾಗದೆ ಮುಂದಿನ ದಿನಗಳಲ್ಲೂ ಮಳೆಗಾಲದಲ್ಲಿ ನೀರು ನಿಲ್ಲದಂತೆ ಶಾಶ್ವತ ಹಾಗೂ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸುವಂತೆ ಸಾರ್ವಜನಿಕರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!