ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ ಅವರಿಗೆ ಬೆಳ್ತಂಗಡಿ ನ್ಯಾಯಾಲಯ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದೆ.

2015ರ ಜುಲೈ 23ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಬೆಳ್ತಂಗಡಿ ವಲಯದ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿರುವ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಬೆಳ್ತಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಹಾಗೂ ತನಿಖಾಧಿಕಾರಿ ರವಿ ಬಿ.ಎಸ್. ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಮಲಿಂಗಪ್ಪ ಅವರು ಆರೋಪಿಗೆ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಆಶೀತಾ ವಾದ ಮಂಡಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!