ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ ಅವರಿಗೆ ಬೆಳ್ತಂಗಡಿ ನ್ಯಾಯಾಲಯ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದೆ.
2015ರ ಜುಲೈ 23ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಬೆಳ್ತಂಗಡಿ ವಲಯದ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿರುವ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಬೆಳ್ತಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಹಾಗೂ ತನಿಖಾಧಿಕಾರಿ ರವಿ ಬಿ.ಎಸ್. ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಮಲಿಂಗಪ್ಪ ಅವರು ಆರೋಪಿಗೆ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಆಶೀತಾ ವಾದ ಮಂಡಿಸಿದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…